ಮೈಸೂರು:ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಯಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಆದರೆ, ವಿಧಿಯಾಟವೇ ಬೇರೆ ಇತ್ತು. ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಕೇಳಿಬಂದಿದೆ.
ವಿಜಯನಗರ ನಿವಾಸಿ ಅಶ್ವಿನಿ (23) ಮೃತ ಗರ್ಭಿಣಿ. ಮೈಸೂರು ತಾಲೂಕಿನ ಮೈದನಹಳ್ಳಿಯ ಪ್ರಮೋದ್ ಮತ್ತು ಅಶ್ವಿನಿ ಪರಸ್ಪರ ಪ್ರೀತಿಸಿ 2021ರ ಜೂನ್ 13ರಂದು ಮದುವೆಯಾಗಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ ತಂದೆ ಮನೆಯಲ್ಲಿದ್ದಳು. ಮಾ.18ರ ರಾತ್ರಿ ಮಾವನ ಮನೆಯಿಂದ ತನ್ನ ಪತ್ನಿಯನ್ನ ಪ್ರಮೋದ್​ ಕರೆದೊಯ್ದಿದ್ದ. ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಮಗಳನ್ನು ಅಳಿಯನೇ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ. ಇಬ್ಬರೂ ಪ್ರೀತಿಸಿ ವಿವಾಹವಾಗಿದ್ದರು. ಇದೀಗ ಜಾತಿ ನೆಪದಲ್ಲಿ ನಿಂದಿಸಿ ಕೊಲೆ ಮಾಡಿದ್ದಾನೆ ಎಂದು ಮೃತಳ ಪೋಷಕರು ದೂರಿದ್ದಾರೆ. ಇಲವಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ಭೀಕರ ಅಪಘಾತ: ಕಸದ ಲಾರಿ ಡಿಕ್ಕಿ, ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ದುರ್ಮರಣ

ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + thirteen =
Remember me
