ಕಡಬ(ದಕ್ಷಿಣ ಕನ್ನಡ):ಸಾವು ಯಾವಾಗ? ಯಾವ ರೂಪದಲ್ಲಿ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ. ಸೀಬೆಕಾಯಿ ತಿನ್ನುವ ಆಸೆಯಿಂದ ಮರ ಹತ್ತಿದ 8 ವರ್ಷದ ಬಾಲಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಸಂಭವಿಸಿದೆ.
ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ ಗೌಡ ಎಂಬುವರ ಪುತ್ರ ಉಲ್ಲಾಸ್​ ಡಿ.ಎಂ. ಮೃತ ದುರ್ದೈವಿ. ಈತ ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ.
ಗುರುವಾರ ಶಾಲೆಯಿಂದ ಬಂದ ಬಳಿಕ ಮನೆ ಸಮೀಪ ಸೀಬೆಹಣ್ಣು ಕೊಯ್ಯಲು ಮರ ಹತ್ತಿದ ಉಲ್ಲಾಸ್​, ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ. ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವ ಉಂಟಾಗಿತ್ತು. ತಕ್ಷಣ ಕಡಬ ಸರ್ಕಾರಿ ಸಮುದಾಯ ಅಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾವಗಡದಲ್ಲಿ ಭೀಕರ ಅಪಘಾತ: 5ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
