ಬೆಂಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್​ ಹತ್ಯೆ ಖಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಬೆಂಗಳೂರಲ್ಲಿ ಎಲ್ಲ ಸಚಿವರ ಮನೆಗಳ ಬಳಿ ಹೆಚ್ಚಿನ ಪೊಲೀಸ್​ ಬಂದೋಬಸ್ತ್​ ಏರ್ಪಡಿಸುವಂತೆ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಡಿಸಿಪಿಗಳಿಗೆ ಸೂಚನೆ ಬಂದಿದೆ.
ಇನ್ನು ಗೃಹ ಸಚಿವರ ಮನೆಗೆ ಮುತ್ತಿಗೆ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ, ಈ ಬಗ್ಗೆ ಮೊದಲೇ ಮುನ್ಸೂಚನೆ ಅರಿತು ಕೊಳ್ಳಬೇಕಿತ್ತು, ಅದು ನಮ್ಮಿಂದ ಆಗಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಇಂಟಲಿಜೆನ್ಸ್ ವೈಫಲ್ಯವನ್ನ ಒಪ್ಪಿಕೊಂಡರು. ನಮ್ಮ ಡಿಸಿಪಿ, ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮಗೆ ಬೆಳಗ್ಗೆ 10 ಗಂಟೆಗೆ ವಿಚಾರ ಗೊತ್ತಾಯ್ತು. ಗೃಹ ಸಚಿವರಿಗೆ ಮನವಿಪತ್ರ ಕೊಟ್ಟು, ಮೌನ ಪ್ರತಿಭಟನೆ ಮಾಡ್ತೀವಿ ಅಂತ ಮಾಹಿತಿ ಇತ್ತು. ಅಲ್ಲಿ ರೆಸಿಡೆನ್ಸಿಷಿಯಲ್ ಗಾರ್ಡ್ ಇದ್ರು. ಮೊದಲು ಮೌನವಾಗಿ ಪ್ರತಿಭಟನೆ ಮಾಡ್ತಿದ್ರು ಅಂತ ಗೊತ್ತಾಗಿದೆ. ನಂತರ ಅಲ್ಲಿದ್ದ ಸಿಬ್ಬಂದಿ ಗೇಟ್ ಮುಚ್ಚಿದ್ದಾರೆ. ಆಗ ಪ್ರತಿಭಟನಾಕಾರರು ಗೇಟ್ ತಳ್ಳಿಕೊಂಡು ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ನಮ್ಮ ಪೊಲೀಸರು ಅವರನ್ನು ಹಿಡಿದುಕೊಂಡು ವಶಕ್ಕೆ ಪಡೆದಿದ್ದಾರೆ ಎಂದು ವಿವರಿಸಿದರು.
ನಮ್ಮವರು ಮುನ್ಸೂಚನೆ ಕಲೆಕ್ಟ್ ಮಾಡಬೇಕಿತ್ತು, ಅದು ಅಗಲಿಲ್ಲ. ಈಗಾಗಲೇ ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ತಪ್ಪು ಕಂಡು ಬಂದರೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಗೃಹ ಸಚಿವರಿಗೂ ಮಾಹಿತಿ ನೀಡಲಾಗಿದೆ. ಸಿಎಆರ್ ಗಾರ್ಡ್ ಇರುವಾಗ ಮನೆಗೆ ನುಗ್ಗುವುದು ಒಪ್ಪುವಂತಹದ್ದಲ್ಲ ಎಂದರು.
ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಕುಣಿಗಲ್​ ಸರ್ಕಾರಿ ಆಸ್ಪತ್ರೆ ಮುಂದೆ ಬಾಣಂತಿ ಶವ ಇಟ್ಟು ಪ್ರತಿಭಟನೆ: ಹೆರಿಗೆ ವೇಳೆ ವೈದ್ಯರ ಎಡವಟ್ಟಿಗೆ ಮಹಿಳೆ ಸಾವು?

ಆನಂದ್​ ಸಿಂಗ್​ ಒತ್ತಡಕ್ಕೆ ಮಣಿದ ಸರ್ಕಾರ: ವಿಜಯನಗರ- ಕೊಪ್ಪಳ ಜಿಲ್ಲಾ ಉಸ್ತುವಾರಿಗಳು ಅದಲು-ಬದಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
