ಬೆಂಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಪ್ರವೀಣ್​ ಹತ್ಯೆ ಖಂಡಿಸಿ ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆದರೂ ಮನೆಯ ಗೇಟ್​ ತಳ್ಳಿ ಬಾಗಿಲ ಬಳಿಗೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪ್ರವೀಣ್​ ಸಾವಿಗೆ ನ್ಯಾಯ ಬೇಕು. ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಗೃಹಸಚಿವರ ವಿರುದ್ಧ ಘೋಷಣೆ ಕೂಗುತ್ತಾ, ನಿವಾಸದೊಳಗೆ ನುಗ್ಗಲು ಯತ್ನಿಸಿದರು. ಕೂಡಲೇ ಪೊಲೀಸರು ತಡೆದರು. ಮನೆ ಬಾಗಿಲ ಬಳಿ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. 50ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಚಾರ್ಜ್ ನಡೆಸಿದರು. ಗೃಹ ಸಚಿವರ ನಿವಾಸದ ಬಳಿ ಹೂ ಕುಂಡಗಳು ಪುಡಿಪುಡಿಯಾಗಿವೆ. ಐವತ್ತಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಗೃಹಸಚಿವr ಪ್ರತಿಕ್ರಿಯೆ: ಎಬಿವಿಪಿ ಕಾರ್ಯಕರ್ತರು ಗೃಹಸಚಿವರ ಮನೆ ಬಳಿ ಪ್ರತಿಭಟನೆ ನಡೆಸಿದ ವೇಳೆ ಆರಗ ಜ್ಞಾನೇಂದ್ರ ಅವರು ಮನೆಯಲ್ಲಿ ಇರಲಿಲ್ಲ. ಶಿವಮೊಗ್ಗದಲ್ಲಿರುವ ಅವರು, ಅಲ್ಲೇ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಮನೆ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಪಿಎಫ್​ಐ, ಎಸ್​ಡಿಪಿಐ ನಿಷೇಧಕ್ಕೆ ಒತ್ತಾಯಿಸಿದ್ದಾರೆ. ನಮ್ಮವರು ಬಾಡಿಗೆ ಕಾರ್ಯಕರ್ತರಲ್ಲ. ದೇಶದ ಕಾರ್ಯಕ್ಕೆ ಸಜ್ಜಾದ ಮನಸ್ಥಿತಿ ಅವರದ್ದು. ಪ್ರವೀಣ್​ ಸಾವು ನಮಗೂ ನೋವಿದೆ. ನಮಗೆ ಸಿದ್ದರಾಮಯ್ಯರ ಸರ್ಟಿಫಿಕೇಟ್ ಬೇಕಿಲ್ಲ. ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಮಾಡಿ ರಕ್ತ ಹರಿಸಿದರು. ಮತಾಂದ ಶಕ್ತಿಗಳ ಮೇಲಿನ ಪ್ರಕರಣ ಹಿಂಪಡೆದರು. ಹೀಗಾಗಿ ಇಂದಿನ ಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ, ಆಳಂದ, ಶಿವಮೊಗ್ಗ, ಬೆಂಗಳೂರಿನಲ್ಲಿ ಗಲಭೆ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಿಸಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 15 ಸಿಬ್ಬಂದಿ ಅಮಾನತು, ಅನೇಕರ ವರ್ಗಾವಣೆ ಮಾಡಿದ್ದೇವೆ. ಸಮರ್ಪಕ ಕ್ರಮ ಕೈಗೊಂಡಿದ್ದೇವೆ. ಆದರೆ ಒಂದೇ ದಿನದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಿಲ್ಲ. ಪ್ರವೀಣ್ ಹತ್ಯೆಗೆ ಸಂಘಟನೆಯಲ್ಲಿ ಬೇಸರವಿರುವುದು ನಿಜ ಎಂದರು.
ಸಿಇಟಿ ಫಲಿತಾಂಶ ಪ್ರಕಟ: ಇವರೇ ನೋಡಿ ಈ ಬಾರಿಯ ಟಾಪರ್ಸ್​

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಮೈಸೂರಲ್ಲಿ ಮೂವರು ವಕೀಲರಿದ್ದ ಕಾರು ನಾಲೆಗೆ ಪಲ್ಟಿ: ಇಬ್ಬರು ನಾಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 1 =
Remember me
