ಕೋಲಾರ:ಮಾಲೂರು ತಾಲೂಕಿನ ಹುಳದೇನಹಳ್ಳಿ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಗೂಡ್ಸ್​ ವಾಹನ ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ಚಿಕ್ಕಬಳ್ಳಾಪುರ ಮೂಲದ ಹನುಮಂತು(45) ಮತ್ತು ಇವರ ಪುತ್ರ ಭುವನ್(12) ಮೃತ ದುರ್ದೈವಿಗಳು. 14 ವರ್ಷದ ಮತ್ತೊಬ್ಬ ಮಗ ಸೇರಿ ಮೂವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ತಂದೆ-ಮಕ್ಕಳು ಕುರಿಗಳನ್ನು ಬಂಗಾರಪೇಟೆ ಶುಕ್ರವಾರದ ಸಂತೆಯಲ್ಲಿ ಮಾರಲೆಂದು ಗೂಡ್ಸ್​ ವಾಹನದಲ್ಲಿ ಹೋಗುತ್ತಿದ್ದರು.
ಬಂಗಾರಪೇಟೆ ಶುಕ್ರವಾರದ ಸಂತೆಗೆ ಹೋಗಲೆಂದು ಕುರಿಗಳ ಸಮೇತ ತೊರಹಳ್ಳಿಯ ಮಾವನ ಮನೆಗೆ ಬಂದಿದ್ದ ತಂದೆ-ಮಕ್ಕಳು ಇಂದು ಬೆಳಗ್ಗೆ ಸಂತೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಚಪ್ಪಡಿ ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ ಮತ್ತು ಕುರಿ ತುಂಬಿದ್ದ ಗೂಡ್ಸ್​ ವಾಹನದ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿವೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಜೆಡಿಎಸ್​ ಪರ ಅನಂತಕುಮಾರ್ ಪುತ್ರಿ ಬ್ಯಾಟಿಂಗ್​: ರಾಜ್ಯ ರಾಜಕೀಯದಲ್ಲಿ ಸಂಚಲನ

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
