ಕಲಬುರಗಿ:ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದರು.
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್ವರ(35) ಮೃತರು. ಆ.26ರಂದು ಮಣ್ಣೂರು ಗ್ರಾಮದ ಹೊರವಲಯದಲ್ಲಿ ಬೈಕ್​ನಲ್ಲಿ ತೆರಳುವಾಗ ಅಪಘಾತ ಸಂಭವಿಸಿ ಪರಮೇಶ್ವರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ಪರಮೇಶ್ವರ ಅವರನ್ನ ಕಂಡು ದುಃಖಿಸಿದ ಗ್ರಾಮಸ್ಥರು ಅವರು ಚೇತರಿಸಿಕೊಳ್ಳಬೇಕು, ಜೀವಂತವಾಗಿ ಗ್ರಾಮಕ್ಕೆ ಬರಲೆಂದು ದೇವರದಲ್ಲಿ ಹರಕೆ ಹೊತ್ತು ದೀರ್ಘದಂಡ ನಮಸ್ಕಾರ ಹಾಕಿದ್ದರು. ಶೇಷಗಿರಿ ಗ್ರಾಮದಿಂದ ಮಣ್ಣೂರು ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಜನರ ಪ್ರಾರ್ಥನೆ ಫಲಿಸಲಿಲ್ಲ. ಪರಮೇಶ್ವರ ಬಾರದ ಲೋಕಕ್ಕೆ ಹೋಗಿದ್ದು, ಇಡೀ ಊರಲ್ಲಿ ಸೂತಕದ ಛಾಯೆ ಆವರಿಸಿದೆ.
ಮಳೆಯಿಂದ ಮಂಡ್ಯದಲ್ಲಿ ಬಯಲಾಯ್ತು ಭಯಾನಕ ರಹಸ್ಯ! ಸ್ನಾನದ ಕೋಣೆಯಲ್ಲಿ ಸುರಂಗ… ಮಾಲೀಕನಿಗೆ ಕಾದಿತ್ತು ಶಾಕ್

ಒಬ್ಬಳನ್ನೇ ಮದ್ವೆಯಾದ ಇಬ್ಬರು! ಆ.28ರ ರಾತ್ರಿ ಮಾಡಬಾರದ್ದು ಮಾಡಲು ಹೋಗಿ ಸಿಕ್ಕಿಬಿದ್ದ 2ನೇ ಪತಿ

ದಶಕದ ಬಳಿಕ ನೀರಲ್ಲಿ ಮುಳುಗುತ್ತಿದೆ ಕಾರೇಹಳ್ಳಿ ಶ್ರೀ ರಂಗನಾಥಸ್ವಾಮಿ! ಕಣ್ತುಂಬಿಕೊಳ್ಳಲು ಹರಿದು ಬರ್ತಿದೆ ಜನಸಾಗರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
