ವಿಜಯಪುರ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದಲ್ಲಿ ಮುಳುಗಿದ್ದ ನವಜೋಡಿಯ ಬಾಳಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕುಟುಂಬಸ್ಥರೊಂದಿಗೆ ದೇವರ ದರ್ಶನಕ್ಕೆಂದು ತೆರಳುವ ಮಾರ್ಗಮಧ್ಯೆ ಟೆಂಪೋ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮದುಮಗಳು ಮೃತಪಟ್ಟಿದ್ದಾಳೆ.
ಇಂತಹ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಿ.ಕೆ. ಯರಗಲ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ರಾಣಿ ಚವ್ಹಾಣ(26) ಮೃತ ದುರ್ದೈವಿ. ನವವಿವಾಹಿತ ಗಣೇಶ ಸೇರಿ 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇವರೆಲ್ಲರೂ ಕಲಬುರಗಿ ಜಿಲ್ಲೆ ಶಂಕರವಾಡಿ ನಿವಾಸಿಗಳು.
ಶುಕ್ರವಾರ ಬೆಳಗ್ಗೆ ನವ ವಿವಾಹಿತ ದಂಪತಿಯನ್ನು ಕೊಕಟನೂರ ದೇವಸ್ಥಾನಕ್ಕೆ ಕುಟುಂಬಸ್ಥರು ಕರೆದೊಯ್ಯುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ನವವಿವಾಹಿತೆ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾಳೆ. ಗಾಯಾಳುಗಳನ್ನು ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.
ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fourteen =
Remember me
