ಬೆಂಗಳೂರು:ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.
ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್​ ಆ್ಯಸಿಡ್​ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ ಹೋರಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳ ದಯನೀಯ ಸ್ಥಿತಿ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ತ ತಲೆಮರೆಸಿಕೊಂಡಿದ್ದ ನಾಗೇಶ್​ನ ಪತ್ತೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರು.

16 ದಿನದ ಬಳಿಕ ತಿರುವಣ್ಣಾಮಲೈನ ಆಶ್ರಮವೊಂದರಲ್ಲಿ ಸ್ವಾಮೀಜಿ ವೇಷದಲ್ಲಿ ಇರುವುದು ಖಚಿತಪಡಿಸಿಕೊಂಡ ಪೊಲೀಸರು ಭಕ್ತರ ಸೋಗಲ್ಲಿ ಆಶ್ರಮಕ್ಕೆ ತೆರಳಿದ್ದರು. ಕೊನೆಗೂ ಆರೋಪಿ ನಾಗೇಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ತಾಯಿ ಕಣ್ಣೆದುರೇ ಪ್ರಿಯಕರನೊಂದಿಗೆ ಪರಾರಿ​! ಕೊಳ್ಳೇಗಾಲದಲ್ಲಿ ಘಟನೆ

ಬೆಂಗಳೂರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ಎರಚಿದ ಭಗ್ನಪ್ರೇಮಿ! ಯುವತಿಯ ನರಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
