ಚಾಮರಾಜನಗರ:ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ 30ಕ್ಕೂ ಹೆಚ್ಚು ಬುದ್ಧಿಮಾಂದ್ಯ ಮಕ್ಕಳಿಗೆ ನಟ ಭುವನ್ ಪೊನ್ನಣ್ಣ ಮತ್ತು ನಟಿ ಹರ್ಷಿಕಾ ಪೂಣಚ್ಚ ನೆರವಿನ ಹಸ್ತ ಚಾಚಿದ್ದಾರೆ.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪೃಥ್ವಿ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಇಬ್ಬರೂ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಅವರೊಂದಿಗೆ ಮಕ್ಕಳಂತೆ ಕುಣಿದು ನಲಿದರು.
ಇತ್ತೀಚಿಗೆ ಗುಂಡ್ಲುಪೇಟೆಗೆ ತೆರಳಿ ಬುದ್ಧಿಮಾಂಧ್ಯ ಮಕ್ಕಳಿಗೆ ಅಗತ್ಯ ನೆರವು ನೀಡುವುದಾಗಿ ನಟ ಭುವನ್ ಪೊನ್ನಣ್ಣ ಭರವಸೆ ನೀಡಿದ್ದರು. ಅದರಂತೆ ನಿನ್ನೆ ರಾತ್ರಿ ವಸತಿ ಶಾಲೆಗೆ ಭೇಟಿ ನೀಡಿ, ಭುವನಂ ಫೌಂಡೇಷನ್​ನಿಂದ ಎರಡು ತಿಂಗಳಿಗಾಗುವಷ್ಟು ಆಹಾರಧಾನ್ಯ, ನಿತ್ಯೋಪಯೋಗಿ ವಸ್ತುಗಳನ್ನು ವಿತರಿಸಿದರು.ಇದನ್ನೂ ಓದಿರಿಮಧುಗಿರಿ ಕರ್ನಾಟಕಕ್ಕೇ ಮಾದರಿ!: ಸೋಂಕಿತ ಶಿಕ್ಷಕರಿಗೆ ಆತ್ಮಸ್ಥೈರ್ಯ ತುಂಬಲು ಯತ್ನ, ವೆಬಿನಾರ್​ನಲ್ಲಿ ಜಾಗೃತಿ
ಬಳಿಕ ಮಾತನಾಡಿದ ನಟ ಭುವನ್ ಮತ್ತು ಪೂಣಚ್ಚ, ಇಲ್ಲಿನ ಬುದ್ಧಿಮಾಂದ್ಯ ಮಕ್ಕಳ ಪರಿಸ್ಥಿತಿ ಶೋಚನೀಯವಾಗಿದೆ. ಸದ್ಯಕ್ಕೆ ತಾತ್ಕಾಲಿಕ ನೆರವು ನೀಡಿದ್ದೇವೆ. ನಮ್ಮ ಸೇವೆಗೆ ಉತ್ತಮ ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಎಲ್ಲಿಯೇ ಇಂತಹ ಪರಿಸ್ಥಿತಿ ಇದ್ದರೂ ನನಗೆ ಕರೆ ಮಾಡಿ ಕೈಲಾದಷ್ಟು ಅವರಿಗೆ ಸಹಾಯ ಮಾಡುತ್ತೇವೆ ಎಂದು ಭುವನ್ ಹೇಳಿದರು.
30ಕ್ಕೂ ಹೆಚ್ಚು ಬುದ್ಧಿಮಾಂದ್ಯ ಮಕ್ಕಳಿರುವ ಈ ವಸತಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಮಳೆ ಬಂದರೆ ಸೋರುತ್ತದೆ.
ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + nine =
Remember me
