ಬೆಂಗಳೂರು:ರಾಷ್ಟ್ರ ಪ್ರಶಸ್ತಿ ವಿಜೇತ​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಗ್ಗೆ 8ಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ವಿಜಯ್​ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಇಂದು ಬೆಳಗ್ಗೆ 10.30ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದ್ದು, ನಂತರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತೆ. ಹುಟ್ಟೂರಿನಲ್ಲಿ ಒಂದು ತಾಸು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಬಳಿಕ ಸ್ವಗ್ರಾಮದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.
ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸರದಿ ಸಾಲಿನಲ್ಲಿ ನಿಂತು ವಿಜಯ್​ ಪಾರ್ಥಿವ ಶರೀರ ದರ್ಶನ ಪಡೆಯುತ್ತಿದ್ದಾರೆ. ನಟರಾದ ಸತೀಶ್ ನೀನಾಸಂ, ಮುಖ್ಯಮಂತ್ರಿ ಚಂದ್ರು, ರಂಗಾಯಣ ರಘು, ನಿರ್ದೇಶಕ ಲಿಂಗದೇವರು, ಗುರುದೇಶಪಾಂಡೆ ಸೇರಿದಂತೆ ಹಲವು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

ನಟ ಸಂಚಾರಿ ವಿಜಯ್​ಗೆ ಧಾರವಾಡ ಕಲಾವಿದನ ‘ಕಲಾ ಶ್ರದ್ಧಾಂಜಲಿ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
