ಶಿವಮೊಗ್ಗ:ಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವಿನ ವಿವಾದ ಬಳಿಕ ಯುವಕನಿಗೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿಸಲಾಗಿದೆ. ಶಿವಮೊಗ್ಗದಲ್ಲಿ ಪ್ರಕ್ಷ್ಯುಬದ್ಧ ಸ್ಥಿತಿ ನಿರ್ಮಾಣವಾಗಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದು, ಎಡಿಜಿಪಿ ಅಲೋಕ್ ಕುಮಾರ್ ಮೊಕ್ಕಾಂ ಹೂಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಆರ್​ಎಎಫ್(ರ್ಯಾಪಿಡ್ ಆಕ್ಷನ್ ಫೋರ್ಸ್) ತುಕಡಿಯಿಂದ ರೂಟ್ ಮಾರ್ಚ್ ನಡೆಯುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ಆರ್​ಎಎಫ್ ತುಕಡಿ ಜತೆಗೆ ಕೆಎಸ್​ಆರ್​ಪಿ ಹಾಗೂ ಡಿಎಆರ್ ನಿಂದಲೂ ಪಥ ಸಂಚಲನ ನಡೆಯುತ್ತಿದೆ. ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಿಂದ ಕೆ.ಆರ್. ಪುರಂ ರಸ್ತೆ ಸೇರಿದಂತೆ ಹಳೇ ಶಿವಮೊಗ್ಗ ಭಾಗದಲ್ಲಿ ರೂಟ್ ಮಾರ್ಚ್ ನಡೆದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್​ ಕುಮಾರ್, ಸಾರ್ವಜನಿಕರಲ್ಲಿರುವ ಭಯ ತೊಡೆದುಹಾಕುವ ನಿಟ್ಟಿನಲ್ಲಿ ಆರ್​ಎಎಫ್ ನಿಂದ ರೂಟ್ ಮಾರ್ಚ್ ಮಾಡಲಾಗುತ್ತಿದೆ. ತಪ್ಪಿತಸ್ಥರು ಮತ್ತು ಪುಡಾರಿಗಳಿಗೆ ಭಯ ಹುಟ್ಟಿಸಲು ಇದೂ ಒಂದು ತಂತ್ರ. ಜನರು ಅಂಜಬೇಕಾದ ಅವಶ್ಯಕತೆಯಿಲ್ಲ‌. ಜನರ ಜತೆ ನಾವಿದ್ದೇವೆ. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಯಲಿದೆ. ನೀವೆಲ್ಲರೂ ಸೇಫ್ ಇದ್ದೀರಿ ಎಂದು ತಿಳಿಸುವುದೇ ಇದರ ಪ್ರಮುಖ ಉದ್ದೇಶ. ಶಿವಮೊಗ್ಗದಲ್ಲಿ ಬೇರೆ ಬೇರೆ ಜಿಲ್ಲೆಯ ಪೊಲೀಸರು ಬೀಡು ಬಿಟ್ಟಿದ್ದಾರೆ. ಜನರು ಯಾವುದೇ ಕಾರಣಕ್ಕೂ ಭಯಪಡುವ ಅವಶ್ಯಕತೆಯಿಲ್ಲ ಎಂದು ಅಭಯ ನೀಡಿದರು.
ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು

ಧರ್ಮಸ್ಥಳದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಭಿನ್ನಕೋಮಿನ ಜೋಡಿಗೆ ಮಾರ್ಗದಲ್ಲೇ ಕಾದಿತ್ತು ಶಾಕ್​

ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 3 =
Remember me
