ಮಂಡ್ಯ:ಪ್ರಸಿದ್ಧ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು (ಶುಕ್ರವಾರ) ಮುಂಜಾನೆ 4.58ರ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರು ಮಹಾರಥೋತ್ಸವ ಕಣ್ತುಂಬಿಕೊಂಡು ಜಯಘೋಷ ಮೊಳಗಿಸಿದರು.
ಗಂಗಾಧರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನ ರಥದಲ್ಲಿ ಕೂರಿಸುತ್ತಿದ್ದಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪೂಜೆ ಸಲ್ಲಿಸಿದರು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿ ಕಾಲಭೈರವೇಶ್ವರ ಸ್ವಾಮಿಗೆ ಜೈ, ಗಂಗಾಧರೇಶ್ವರ ಸ್ವಾಮಿಗೆ ಜೈ ಎಂದು ಜೈಕಾರ ಕೂಗಿದರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಡ್ಡಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿದರು.

ಕರೊನಾ ಹಿನ್ನೆಲೆ ಕಳೆದ 2 ವರ್ಷದ ಸರಳವಾಗಿಯೇ ರಥೋತ್ಸವ ನಡೆದಿತ್ತು. ಈ ಬಾರಿ ಅದ್ದೂರಿಯಾಗಿ ನಡೆಯಿತು. ವಿದ್ಯುತ್ ದೀಪಾಲಂಕಾರದಿಂದ ಆದಿಚುಂಚನಗಿರಿ ಕ್ಷೇತ್ರ ಕಂಗೊಳಿಸುತ್ತಿತ್ತು.
ಒಳ್ಳೇದಾಗ್ಲಿ ನನ್​​ ಕಂದನಿಗೆ… ಅಪ್ಪು‌ ಸಾವಿನ ಸುದ್ದಿ ಗೊತ್ತಿಲ್ದೆ ಬರ್ತ​ಡೇ, ಜೇಮ್ಸ್‌ಗೆ ಶುಭಕೋರಿದ‌ ಸೋದರತ್ತೆ

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ: ನೋವಲ್ಲೂ ಆಕೆ ಬಾಯ್ಬಿಟ್ಟ ರಹಸ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + sixteen =
Remember me
