ನಾಗಮಂಗಲ:ಪ್ರಸಿದ್ಧ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.11ರಿಂದ 19ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.11ರ ಬೆಳಗ್ಗೆ 8.30ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ನಾಂದಿ ಪೂಜೆ ಹಾಗೂ ಧರ್ಮಧ್ವಜಾರೋಹಣ ಮಾಡುವ ಮೂಲಕ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, 10.30ಕ್ಕೆ ಯುವ ಸಮ್ಮೇಳನ ನಡೆಯಲಿದೆ.
ಮಾ.12ರ ಬೆಳಗ್ಗೆ 10.30ಕ್ಕೆ ಚುಂಚಾದ್ರಿ ಮಹಿಳಾ ಸಮಾವೇಶ ಹಾಗೂ ಸಂಜೆ 7ಗಂಟೆಗೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ. 13ರ ಬೆಳಗ್ಗೆ 10.30ಕ್ಕೆ ಸಂಗೀತೋತ್ಸವ ಹಾಗೂ ರಾತ್ರಿ 7 ಗಂಟೆಗೆ ಸರ್ವಾಲಂಕೃತ ಶ್ರೀ ಮಲ್ಲೇಶ್ವರಸ್ವಾಮಿಯ ಉತ್ಸವ. 14ರ ಬೆಳಗ್ಗೆ 10.30ಕ್ಕೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಹಾಗೂ ಸಂಜೆ 7ಗಂಟೆಗೆ ಶ್ರೀ ಸಿದ್ದೇಶ್ವರಸ್ವಾಮಿ ಉತ್ಸವ. 15ರ ಬೆಳಗ್ಗೆ 7.30ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣಕವಚಾಲಂಕಾರ ಪೂಜೆ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಉದ್ಘಾಟನೆಯಾಗಲಿದ್ದು, ನಾಡಿನ ಹಲವು ಭಾಗಗಳಿಂದ ರೈತರು, ಕೈಗಾರಿಕೋದ್ಯಮಿಗಳು, ಕೃಷಿಕರು ಆಗಮಿಸಲಿದ್ದಾರೆ.
ಮಾ. 15ರಂದು ರಾತ್ರಿ 7 ಗಂಟೆಗೆ ಶ್ರೀ ಕಾಲಭೈರವೇಶ್ವರಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ಜರುಗಲಿದೆ. 16ರ ಬೆಳಗ್ಗೆ 9.30ಕ್ಕೆ ಉಚಿತ ಸಾಮೂಹಿಕ ವಿವಾಹ ಹಾಗೂ 50 ವರ್ಷ ವೈವಾಹಿಕ ಜೀವನ ಪೂರೈಸಿರುವ ಹಿರಿಯ ದಂಪತಿಗಳನ್ನು ಸನ್ಮಾನಿಸಲಾಗುವುದು.
16ರಂದು ರಾತ್ರಿ 7 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜ್ವಾಲಾಪೀಠಾರೋಹಣ, ಸಿದ್ಧಸಿಂಹಾಸನ ಪೂಜೆ ಹಾಗೂ ರಾತ್ರಿ 9 ಗಂಟೆಗೆ ಚಂದ್ರಮಂಡಲೋತ್ಸವ ಪೂಜೆ ನಡೆಯಲಿದೆ. ಮಾ. 17ರಂದು ಬೆಳಗ್ಗೆ ದೇವತೆಗಳಿಗೆ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಮಹೋತ್ಸವ, ರಾತ್ರಿ 7.30 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಬಳಿಕ ಶ್ರೀ ಕಾಲಭೈರವೇಶ್ವರಸ್ವಾಮಿಯ ತಿರುಗಣಿ ಉತ್ಸವ, ಪುಷ್ಕರಣಿಯಲ್ಲಿ ತೆಪ್ಪೋತ್ಸವ, ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
18ರಂದು ರಥೋತ್ಸವ:ಮಾ.18ರ ಮುಂಜಾನೆ ಬ್ರಾಹ್ಮಿ ಮೂಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿಯ ಮಹಾರಥೋತ್ಸವ ಹಾಗೂ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಲಿದ್ದು, ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ. ಅಂದು ಸಂಜೆ 6.30ಕ್ಕೆ ವಿವಿಧ ಗ್ರಾಮಗಳ ನೂರಾರು ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ಗಿರಿಪ್ರದಕ್ಷಿಣಿ ನಡೆಯಲಿದೆ. ಸಂಜೆ 7ಕ್ಕೆ ಶ್ರೀ ಸೋಮೇಶ್ವರಸ್ವಾಮಿಯ ಉತ್ಸವ ಜರುಗಲಿದೆ. ಮಾ. 19ರಂದು ಜಾತ್ರಾ ಮಹೋತ್ಸವದ ಕೊನೆಯ ದಿನ ಶ್ರೀಕ್ಷೇತ್ರದ ಬಿಂದು ಸರೋವರದಲ್ಲಿ ಗಂಗಾಪೂಜೆ, ಅವಭೃತ ಸ್ನಾನ ಇತ್ಯಾದಿ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ಬಳಿಕ ಸಭಾ ಕಾರ್ಯಕ್ರಮದ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆಬೀಳಲಿದೆ ಎಂದು ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.
ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುವೆ, ಜನಾದೇಶ ಗೆದ್ದವರಿಗೆ ಶುಭಾಶಯಗಳು: ರಾಹುಲ್​ ಗಾಂಧಿ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + eight =
Remember me
