ಧಾರವಾಡ:‘ಅಗ್ನಿಪಥ’ ಯೋಜನೆ ವಿರೋಧಿಸಿ ದೇಶದ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದೀಗ ಕರ್ನಾಟಕಕ್ಕೂ ಹೋರಾಟದ ಕಿಚ್ಚು ವ್ಯಾಪಿಸಿದ್ದು, ಧಾರವಾಡ ನಗರದಲ್ಲಿ ಶನಿವಾರ ಪ್ರತಿಭಟನೆಗೆ ಮುಂದಾದ ಯುವಕರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಪ್ರತಿಭಟನೆ ನಡೆಸಲು ನೂರಾರು ಯುವಕರು ಕಲಾಭವನ ಮೈದಾನಕ್ಕೆ ತೆರಳುತ್ತಿದ್ದರು. ಮಾರ್ಗದಲ್ಲೇ ಯುವಕರ ಗುಂಪನ್ನು ಪೊಲೀಸರು ತಡೆದಿದ್ದು, ಈ ವೇಳೆ ವಾಕ್ಸಮರ ವಿಕೋಪಕ್ಕೆ ತಿರುಗಿದೆ, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಹಲವರನ್ನ ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಯುವಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲೂ ಸೇನಾ ಉದ್ಯೋಗಾಕಾಂಕ್ಷಿಗಳು ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರದ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು. ಯಾರೂ ಹಿಂಸಾತ್ಮಕ ಪ್ರತಿಭಟನೆ ನಡೆಸಬಾರದು. ಕೇಂದ್ರ ಸರ್ಕಾರ ಅಗ್ನಪಥ ಯೋಜನೆಯಡಿ ನೇಮಕಾತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fifteen =
Remember me
