ತುಮಕೂರು:ಸಿದ್ಧಗಂಗಾ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಸಂದರ್ಭದಲ್ಲಿ ನಡೆಯಲಿರುವ ಪ್ರಸಿದ್ಧ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ನಾಳೆಯಿಂದ(ಫೆ.18 ರಿಂದ) ಮಾ.4ರವರೆಗೆ 15 ದಿನ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದೆ.
ವಸ್ತು ಪ್ರದರ್ಶನಕ್ಕೆ ರೈತಾಪಿ ಜನ, ಭಕ್ತರು, ವಿದ್ಯಾರ್ಥಿಗಳು ಸೇರಿ ಲಕ್ಷಾಂತರ ಮಂದಿ ಭೇಟಿ ನೀಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವೇಶ ದ್ವಾರದಲ್ಲಿ ಕರೊನಾ ಪರೀಕ್ಷೆ ಹಾಗೂ ಲಸಿಕಾಕರಣಕ್ಕೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ.
ಶ್ರೀಮಠದಲ್ಲಿ ಫೆ.23 ರಿಂದ ಮಾರ್ಚ್​ 4ರವರೆಗೆ ಜರುಗಲಿರುವ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಉತ್ಸವ ಹಾಗೂ ದನಗಳ ಜಾತ್ರೆ ನಡೆಯಲಿದೆ. ದನಗಳ ಜಾತ್ರೆಗೆ ಆಗಮಿಸುವ ಜಾನುವಾರುಗಳಿಗೆ ಮಠದ ವತಿಯಿಂದ ನೀರು ಹಾಗೂ ಬೆಳಕಿನ ವ್ಯವಸ್ಥೆ, ಜಾತ್ರೆಗೆ ಆಗಮಿಸುವವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಸ್ತು ಪ್ರದರ್ಶನ ಟ್ರಸ್ಟ್​ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಬಿ.ಗಂಗಾಧರಯ್ಯ ಮಾತನಾಡಿ, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ಬಿ.ಸಿ.ನಾಗೇಶ್​ ಮತ್ತಿತರರು ಭಾಗವಹಿಸುವರು ಎಂದರು.
ಜನರಿಗೆ ಕುಡಿಯುವ ನೀರು, ಸ್ವಚ್ಛತೆ, ಮೂಲಸೌಕರ್ಯ ಒದಗಿಸಲು ಪಾಲಿಕೆ ಹಾಗೂ ಭದ್ರತೆ ಒದಗಿಸಲು ಪೊಲೀಸ್​ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ವಸ್ತು ಪ್ರದರ್ಶನ ಟ್ರಸ್ಟ್​ ಕಾರ್ಯಕಾರಿ ಸಮಿತಿ ಜಂಟಿ ಕಾರ್ಯದರ್ಶಿ ಎಸ್​. ಶಿವಕುಮಾರ್​ ತಿಳಿಸಿದರು.
ಸಿದ್ಧಗಂಗಾ ಮಠದ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಎಸ್​.ವಿಶ್ವನಾಥಯ್ಯ ಮಾತನಾಡಿ, 18 ಸರ್ಕಾರಿ ಹಾಗೂ 150 ಖಾಸಗಿ ಸೇರಿ ಒಟ್ಟು 168 ಮಳಿಗೆಗಳನ್ನು ತೆರೆಯಲಾಗುವುದು. ವಸ್ತು ಪ್ರದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಪಾರಿತೋಷಕ ಹಾಗೂ ಬಹುಮಾನ ನೀಡಿ ಪೋತ್ಸಾಹಿಸಲಾಗುವುದು ಎಂದರು.
ವಸ್ತು ಪ್ರದರ್ಶನ ಸಂದರ್ಭದಲ್ಲಿ ಪ್ರತಿನಿತ್ಯ ಸಂಜೆ ಬಯಲು ರಂಗಮಂದಿರದಲ್ಲಿ ಸುಗಮ ಸಂಗೀತ, ವಚನಗಾಯನ, ಭರತನಾಟ್ಯ, ಯಕ್ಷಗಾನ, ನಾಟಕ ಸೇರಿದಂತೆ ಸಾಂಸತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ವಸ್ತುಪ್ರದರ್ಶನದಲ್ಲಿ ಶಿವಕುಮಾರ ಸ್ವಾಮೀಜಿ ಜೀವನ ದರ್ಶನ ಪರಿಚಯ ಮಾಡಿಕೊಡಬೇಕು ಹಾಗೂ ಮಠಕ್ಕೆ ಹೋಗಲು ನನೆಗುದಿಗೆ ಬಿದ್ದಿರುವ ಕೆಳಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮಾಧ್ಯಮ ಪ್ರತಿನಿಧಿಗಳು ಸಲಹೆ ನೀಡಿದರು. ಜಂಟಿ ಕಾರ್ಯದರ್ಶಿ ಕೆಂ.ಬ.ರೇಣುಕಯ್ಯ ಇದ್ದರು.
ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + thirteen =
Remember me
