ಬೆಂಗಳೂರು:ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅ.17) ನಡೆದಿದ್ದ ಚುನಾವಣೆಯ ಮತ ಎಣಿಕೆ ಇಂದು (ಬುಧವಾರ) ನಡೆಯುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.
ಕರ್ನಾಟಕದ ಹಿರಿಯ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳದ ಸಂಸದ ಶಶಿ ತರೂರ್ ಅಖಾಡದಲ್ಲಿದ್ದು, ಇವರಿಬ್ಬರಲ್ಲಿ ಯಾರಿಗೆ ಕಾಂಗ್ರೆಸ್​ ಗಾದಿ ಒಲಿಯಲಿದೆ ಎಂಬ ಕುತೂಹಲವಿದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬರುತ್ತಿದ್ದು, 137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ಆಯ್ಕೆ ಆಗ್ತಾರೆ ಎಂಬ ವಿಚಾರ ರಾಜ್ಯ ಕಾಂಗ್ರೆಸ್​ ವಲಯದಲ್ಲಿ ಸಹಜವಾಗಿಯೇ ಸಂತಸ ಮೂಡಿಸಿದೆ.
ಮತಾಧಿಕಾರ ಪಡೆದಿದ್ದ ಒಟ್ಟು 9100 ಮಂದಿ ಪೈಕಿ ಶೇ.96 ಪ್ರದೇಶ ಕಾಂಗ್ರೆಸ್​ ಮುಖಂಡರು ಮತದಾನ ಮಾಡಿದ್ದರು. ಮತಪತ್ರಗಳನ್ನು ಹೊಂದಿದ್ದ ಬ್ಯಾಲೆಟ್​ ಬಾಕ್ಸ್​ಗಳನ್ನು ಎಲ್ಲ ರಾಜ್ಯಗಳಿಂದ ದೆಹಲಿಗೆ ಕಳಿಸಲಾಗಿತ್ತು. ಬುಧವಾರ ಬೆಳಗ್ಗೆ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಹಿರಿಯ ನಾಯಕ ಮಧುಸೂಧನ್​ ಮಿಸ್ತ್ರಿ ನೇತೃತ್ವದ ಸಮಿತಿ ಚುನಾವಣೆ ಕಾರ್ಯ ನಿರ್ವಹಿಸುತ್ತಿದೆ. ಮಾಜಿ ಸಚಿವ ಕೃಷ್ಣಬೈರೇಗೌಡ ಈ ಸಮಿತಿ ಸದಸ್ಯರಾಗಿದ್ದು ಒಟ್ಟಾರೆ ಪ್ರಕ್ರಿಯೆಯಲ್ಲಿ ಪ್ರಮುಖಪಾತ್ರ ವಹಿಸಿದ್ದರು. ಕಾಂಗ್ರೆಸ್​ ಪಕ್ಷದ ಇತಿಹಾಸದಲ್ಲಿ ಅಧ್ಯಕ್ಷರ ಆಯ್ಕೆಗೆ ಆರನೇ ಬಾರಿ ನಡೆಯುತ್ತಿರುವ ಚುನಾವಣೆ ಇದಾಗಿದೆ. 24 ವರ್ಷಗಳ ನಂತರ ಗಾಂಧಿಯೇತರ ಕುಟುಂಬದ ನಾಯಕ ಚುಕ್ಕಾಣಿ ಹಿಡಿಯಲಿದ್ದಾರೆ.
ಅಮ್ಮನ ವಿರುದ್ಧವೇ ದೂರು ದಾಖಲಿಸಿದ್ದ ಪುಟ್ಟ ಪೋರನಿಗೆ ಗೃಹ ಸಚಿವರಿಂದ ಸಿಕ್ತು ದೀಪಾವಳಿ ಗಿಫ್ಟ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − five =
Remember me
