ಸೋಮವಾರಪೇಟೆ:ಡಾ.ಬಿ.ಆರ್.​ ಅಂಬೇಡ್ಕರ್​ ಗುಣಗಾನ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆ ಕೊಡಗು ಜಿಲ್ಲೆ ಸೋಮವಾರಪಟೆ ತಾಲೂಕಿನಲ್ಲಿ ಸಂಭವಿಸಿದೆ.
ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್​ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್​ ಅವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಅಭಿಲಾಶ್​ ಭಾಷಣ ಮಾಡಿದ್ದ. ಈ ಬಗೆಗಿನ ಭಾಷಣದ ವಿಡಿಯೋ ತುಣುಕನ್ನು ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಲಾಷ್​ಗೆ ದೂರವಾಣಿ ಕರೆ ಮಾಡಿದ ಸೋಮವಾರಪಟೆಯ ಕಲ್ಕಂದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಧರ್ಮರಾಜ್​, ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೀವ ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಇವರ ಮೊಬೈಲ್​ ಸಂಭಾಷಣೆ ವೈರಲ್​ ಆಗಿತ್ತು.
ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲು ಅಭಿಲಾಷ್​ ಹಿಂದೇಟು ಹಾಕಿದ್ದರಿಂದ ವಿದ್ಯಾರ್ಥಿಯು ಭಯದಲ್ಲಿ ಇರಬೇಕಾಗಿದೆ ಎಂಬ ವರದಿ ಆಧಾರದ ಮೇಲೆ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶ ವೇದಮೂರ್ತಿ ಆದೇಶಿಸಿದ್ದಾರೆ.
ತಮಕೂರಲ್ಲಿ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆಂಗಳೂರು ಆಸ್ಪತ್ರೆಗೆ ಮಾಜಿ ಸಚಿವ ದಾಖಲು

https://www.vijayavani.net/a-shootout-in-the-theater-watching-kgap-2-cinema/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
