ಬೆಂಗಳೂರು:ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್​ ನಡಿಗೆ ಕಾರ್ಯಕ್ರಮ ಶುರುವಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.
ವಿವಿಧೆಡೆಯಿಂದ ಮೆಜೆಸ್ಟಿಕ್​ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರನ್ನು ದ್ವಾರದಲ್ಲೇ ನಿಂತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು. ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್ ಬಳಿ ತಮಟೆ ಬಾರಿಸಿ ಕಾರ್ಯಕರ್ತರ ಜೊತೆ ಡಿಕೆಶಿ ಸಂಭ್ರಮಿಸಿದರು. ಮಧ್ಯಾಹ್ನ 2.20ಕ್ಕೆ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಯಾತ್ರೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಸೆಲ್ಫೆ ಕ್ಲಿಕ್ಕಿಸಿಕೊಳ್ಳಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಕಾಲೇಜು ಯುವತಿಯರು ಭರ್ಜರಿ ಸ್ಟೆಪ್​ ಹಾಕುತ್ತಾ ಕಾಂಗ್ರೆಸ್​ ನಡಿಗೆಗೆ ಸಾಥ್​ ನೀಡುತ್ತಿದ್ದಾರೆ.

ಎದೆ ಮೇಲೆ, ಕೈ ಮೇಲೆ ಸಿದ್ದರಾಮಯ್ಯರ ಹೆಸರು ಮತ್ತು ಚಿತ್ರವನ್ನ ಹಚ್ಚೆ ಹಾಕಿಸಿಕೊಂಡಿರುವ ಅಭಿಮಾನಿಗಳೂ ಕಾಂಗ್ರೆಸ್ ನಡಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆಯುತ್ತಿದ್ದಾರೆ. ಪಾದಯಾತ್ರೆ ಮಾರ್ಗದಲ್ಲಿ ಸ್ವಾತಂತ್ರ್ಯ ಹೋರಾಟದ ಚಿತ್ರಣ ಬಿಂಬಿಸುವ ಸ್ತಬ್ಧಚಿತ್ರಗಳ ಪ್ರದರ್ಶನ, ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕರ ಚಿತ್ರಗಳು ಗಮನ ಸೆಳೆಯುತ್ತಿವೆ. ಜಾನಪದ ಕಲಾ ತಂಡಗಳು ಮೆರುಗು ನೀಡಿದ್ದು, ಕಲಾವಿದರ ಜತೆಗೆ ಫೋಟೋ ತೆಗೆದುಕೊಳ್ಳಲು ಯುವಕ-ಯುವತಿಯರು ಮುಗಿಬೀಳುತ್ತಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಆಗಮನ ಹೆಚ್ಚಾಗುತ್ತಿರುವ ಹಿನ್ನೆಲೆ ಮೆಜೆಸ್ಟಿಕ್​ ಬಳಿ ಟ್ರಾಫಿಕ್​ ಜಾಮ್​ ಉಂಟಾಗಿದೆ. ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್​ಗಳು ಸಾಲು ಗಟ್ಟಿನಿಂತ ದೃಶ್ಯ ಕಂಡುಬಂತು. ಕಾಂಗ್ರೆಸ್​ ಪದಾಯಾತ್ರೆಯು ಮೆಜೆಸ್ಟಿಕ್​ನಿಂದ ಕೆ.ಆರ್​. ವೃತ್ತ, ಹಡ್ಸನ್​ ವೃತ್ತ, ಜೆ.ಸಿ. ರಸ್ತೆ, ಮಿನರ್ವ ವೃತ್ತ, ವಿವಿ ಪುರಂ ವೃತ್ತ ಮಾರ್ಗವಾಗಿ ಬಸವನಗುಡಿಯ ನ್ಯಾಷನಲ್​ ಕಾಲೇಜು ಮೈದಾನ ತಲುಪಲಿದೆ. ನಂತರ ನ್ಯಾಷನಲ್​ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ದಾರಿಯುದ್ದಕ್ಕೂ ಕಾಂಗ್ರೆಸ್​ ನಡಿಗೆಗೆ ಸ್ವಾಗತ ಕೋರುವ ಬ್ಯಾನರ್​, ಫ್ಲೆಕ್ಸ್​, ಬಂಟಿಂಗ್ಸ್​ ರಾರಾಜಿಸುತ್ತಿವೆ.
ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ… ಹೇಳಿಕೆ: ಮಾಧುಸ್ವಾಮಿ ರಾಜೀನಾಮೆಗೆ ಸ್ವಪಕ್ಷದಲ್ಲೇ ಆಗ್ರಹ

ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ ಕಾಂಗ್ರೆಸ್​ ಕಾರ್ಯಕರ್ತೆ ನವ್ಯಶ್ರೀ ರಾವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 18 =
Remember me
