ಬೆಂಗಳೂರು:ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪರ್ಣಾ ಬದಲು ಡಾ. ಗಿರಿಜಾ ಅವರು ನಿರೂಪಣೆ ಮಾಡಿದ್ದಾರೆ.
ಬೆಂಗಳೂರಿನ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ಬುಧವಾರ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ನಿರೂಪಣೆ ಜವಾಬ್ದಾರಿಯನ್ನು ಹೊಸಬರಿಗೆ ನೀಡಲಾಗಿದ್ದು, ನಿರೂಪಕಿ ಅಪರ್ಣಾ ಅವರಿಗೆ ಈ ಭಾರಿ ಅವಕಾಶ ಕೈತಪ್ಪಿದೆ.
ಕಳೆದ 10-15 ವರ್ಷಗಳಿಂದ ಅಪರ್ಣಾ ಮತ್ತು ಶಂಕರ್​ ಪ್ರಕಾಶ್​ ಇಬ್ಬರಿಗೇ ಸರ್ಕಾರಿ ಕಾರ್ಯಕ್ರಮಗಳ ನಿರೂಪಣೆ ಜವಾಬ್ದಾರಿ ಸಿಗುತ್ತಿದೆ. ಹೊಸಬರಿಗೆ ಅವಕಾಶ ಸಿಗುತ್ತಿಲ್ಲ. ಬದಲಾವಣೆ ಆಗಬೇಕು. ಸಾಕಷ್ಟು ಮಂದಿ ನಿರೂಪಕರಿದ್ದರೂ ಇಬ್ಬರಿಗಷ್ಟೇ ಸರ್ಕಾರದ ಮಟ್ಟದಲ್ಲಿ ಮಣೆ ಹಾಕಲಾಗುತ್ತಿದೆ. ಸರ್ವರಿಗೂ ಸಮ ಬಾಳು, ಸಮ ಪಾಲು ನೀಡಬೇಕು. ಕರೊನಾ ಸಂಕಷ್ಟಕಾಲದಲ್ಲಿ ಬಹುತೇಕ ನಿರೂಪಕರಿಗೆ ಕೆಸಲ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇನ್ನಾದರೂ ಸರ್ಕಾರ ಹೊಸಬರಿಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿ ನಿರೂಪಕಿ ಡಾ.ಗಿರಿಜಾ ಅವರು 2021ರ ಆಗಸ್ಟ್​ 8ರಂದು ಸಿಎಂ ಮನೆ ಮುಂದೆ ಏಕಾಂಗಿ ಹೊರಾಟ ಮಾಡಿದ್ದರು.
ಕೊನೆಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕರು ಹಾಗೂ ಗಾಯಕರ ಬದಲಾವಣೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಈ ಹಿಂದೆ ಡಾ.ಗಿರಿಜಾ ಪ್ರತಿಭಟನೆ ಮಾಡಿದ್ದರು. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕರ ಬದಲಾವಣೆಗೆ ಆಗ್ರಹಿಸಿದ್ದ ಗಿರಿಜಾಗೆ ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮದ ನಿರೂಪಣೆಗೆ ಅವಕಾಶ ನೀಡಲಾಗಿದೆ. ಅಪರ್ಣಾ ಬದಲಿಗೆ ಡಾ.ಗಿರಿಜಾಗೆ ಸ್ಥಾನ ನೀಡಲಾಗಿದೆ.
ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಒಲ್ಲೆ ಎಂದರೂ ಅಣ್ಣನ ಎದುರೇ ‘ಬಾ.. ಮೊದಲಿನಂತೆ ನನ್ನ ಜತೆಗಿರು ಬಾ..’ ಎಂದು ಸೋದರಿಯನ್ನ ಪೀಡಿಸುತ್ತಿದ್ದ… ನಡೆದೇ ಹೋಯ್ತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
