ಬಿಡದಿ(ರಾಮನಗರ):ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಎಚ್​ಡಿಕೆ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಎಚ್​ಡಿಕೆ, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲಳು ಪ್ರಸ್ತಾಪಿಸುವೆ ಎಂದರು.

ಅನೇಕ ವರ್ಷದಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿ 47.37 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆ ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ನಿರ್ಲಕ್ಷ್ಯ ಸಲ್ಲ. ಗೌರವಧನ ಹೆಚ್ಚಿಸುವ ಜತೆಗೆ, ಎನ್​ಪಿಎಸ್​ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕಾಗಿ ಬಜೆಟ್​ನಲ್ಲಿ 339.49 ಲಕ್ಷ ರೂ. ಮೀಸಲಿಡಬೇಕು ಎಂದು ಸರ್ಕಾರವನ್ನ ಎಚ್​​ಡಿಕೆ ಆಗ್ರಹಿಸಿದರು.
ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಲ್ಲ… ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಸ್ವಾಮಿ ಆಕ್ರೋಶ

ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ​ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eight =
Remember me
