ಭಾರತೀಯ ಕ್ರೀಡಾ ಪ್ರಾಧಿಕಾರದಿಂದ 2 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕಾರ್ಯಕ್ಷಮತೆ ಆಧರಿಸಿ ಇನ್ನೊಂದು ವರ್ಷ ಅವಧಿ ವಿಸ್ತರಿಸುವ ಸಾಧ್ಯತೆ ಇದೆ.
ಹುದ್ದೆಯ ವಿವರ:ಯಂಗ್​ ಪ್ರೊಫೆಷನಲ್ಸ್​ (ಜನರಲ್​ ಮ್ಯಾನೇಜ್​ಮೆಂಟ್​) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಕ್ರೀಡಾ ವ್ಯವಸ್ಥೆ ಉತ್ತಮಗೊಳಿಸಲು ಮತ್ತು ಖೇಲೋ ಇಂಡಿಯಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ದಾಖಲೆಗಳ ನಿರ್ವಹಣೆ ಮತ್ತು ವಿಶ್ಲೇಷಣೆಗಾಗಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ:ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಅಥವಾ ಡಿಪ್ಲೊಮಾ ಪದವಿ ಪಡೆದಿರಬೇಕು. ಕನಿಷ್ಠ ಒಂದು ವರ್ಷ ಸಂಬಂಧಪಟ್ಟ ವೃತ್ತಿಯಲ್ಲಿ ಅನುಭವ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ 1:5 ಅನುಪಾತದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಕ್ರೀಡಾ ವಲಯ ಅಥವಾ ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ ಮತ್ತು ವೇತನ:35 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದ್ದು, ಮಾಸಿಕ 40,000 ದಿಂದ 60,000 ರೂ.ವರೆಗೆ ವೇತನ ಇರಲಿದೆ. ಸಂದರ್ಶನಕ್ಕೆ ಹಾಜರಾಗಲು ಹಾಗೂ ಆಯ್ಕೆಯಾದ ನಂತರ ಬೇರೆ ಯಾವುದೇ ಭತ್ಯೆ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಸಂಸ್ಥೆಯ ಅಧಿಕೃತ ವೆಬ್​ಸೈಟ್​ನಲ್ಲಿ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸತಕ್ಕದ್ದು. ನೇರವಾಗಿ ಬಂದ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೇ ದಿನ:12.5.2022ಮಾಹಿತಿಗೆ:https://bit.ly/3kcHpjUಅಧಿಸೂಚನೆಗೆ:https://bit.ly/3LxSKH2
ಸಹ್ಯಾದ್ರಿ ಕಾಲೇಜಿನಲ್ಲಿ ಪ್ರೊಫೆಸರ್​ ಹುದ್ದೆ ನೇಮಕ: ಅರ್ಜಿ ಸಲ್ಲಿಕೆಗೆ ಮೇ 7 ಕೊನೇ ದಿನ

ಯಾದಗಿರಿಯಲ್ಲಿ ಆಟೋ ಹತ್ತಿದ ಯುವತಿಗೆ ಸುಳ್ಳು ಹೇಳಿ, ದಾರಿ ತಪ್ಪಿಸಿ ಹಾಡಹಗಲೇ ರೇಪ್​: ವಿಡಿಯೋ ಚಿತ್ರೀಕರಿಸಿ ವಿಕೃತಿ

ಸುಮಲತಾ ಅಂಬರೀಶ್​ ಬಿಜೆಪಿಗೆ ಸೇರ್ಪಡೆ? ಕೊನೆಗೂ ಬಾಯ್ಬಿಟ್ಟ ಮಂಡ್ಯ ಸಂಸದೆ

ಎಸ್​ಪಿಎಂ ಅವರನ್ನ ಮುಗಿಸಲು ಕಾಂಗ್ರೆಸ್​ನವರೇ ನನ್ನನ್ನು ಬಲವಂತವಾಗಿ ಚುನಾವಣೆಗೆ ನಿಲ್ಲಿಸಿದ್ರು: ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
