ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಇಂಜಿನಿಯರಿಂಗ್​ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸ್ಪೀಡ್​ ಪೋಸ್ಟ್​ ಅಥವಾ ಕೊರಿಯರ್​ ಮೂಲಕ ಕಳುಹಿಸತಕ್ಕದ್ದು.
ಹುದ್ದೆಗಳ ವಿವರ:ಅಸಿಸ್ಟೆಂಟ್​ ಎಕ್ಸಿಕ್ಯೂಟಿವ್​ ಇಂಜಿನಿಯರ್​ (ಸೇಫ್ಟಿ ಆ್ಯಂಡ್​ ಹೆಲ್ತ್​)-2, ಅಸಿಸ್ಟೆಂಟ್​ ಇಂಜಿನಿಯರ್​ (ಸೇಫ್ಟಿ ಆ್ಯಂಡ್​ ಹೆಲ್ತ್​)- 4 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ವಯೋಮಿತಿ:ಅಸಿಸ್ಟೆಂಟ್​ ಎಕ್ಸಿಕ್ಯೂಟಿವ್​ ಇಂಜಿನಿಯರ್​ಗೆ 45 ವರ್ಷ, ಅಸಿಸ್ಟೆಂಟ್​ ಇಂಜಿನಿಯರ್​ಗೆ 40 ವರ್ಷ ನಿಗದಿಪಡಿಸಲಾಗಿದೆ. ಕನಿಷ್ಠ 5ರಿಂದ 8 ವರ್ಷ ವೃತ್ತಿ ಅನುಭವ ಕೇಳಲಾಗಿದೆ.
ಶೈಕ್ಷಣಿಕ ಅರ್ಹತೆ:ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಉನ್ನತ ಪದವಿ ಜತೆಗೆ ಇಂಡಸ್ಟ್ರಿಯಲ್​ನಲ್ಲಿ ಡಿಪ್ಲೊಮಾ ಪದವಿ ಅಥವಾ ಓಶಾ/ನೆಬೋಶ್​/ಸೇಫ್ಟಿ ಮ್ಯಾನೇಜ್​ಮೆಂಟ್​ ವಿಷಯದಲ್ಲಿ ತರಬೇತಿ ಪಡೆದಿರಬೇಕು. ಅಸಿಸ್ಟೆಂಟ್​ ಇಂಜಿನಿಯರ್​ಗೆ ಸಿವಿಲ್​, ಮೆಕ್ಯಾನಿಕ್​ನಲ್ಲಿ ಬಿಇ/ಬಿಟೆಕ್​ ಪದವಿ ಪಡೆದಿರಬೇಕು.
ವೇತನ:ಹುದ್ದೆಗಳಿಗೆ ಕ್ರಮವಾಗಿ 65,000 ರೂ. ಹಾಗೂ 50,000 ರೂ. ಇದೆ.
ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧರಿಸಿ ಶಾರ್ಟ್​ಲಿಸ್ಟ್​ ಮಾಡಲಾದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. 3 ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 11.5.2022ಅಧಿಸೂಚನೆಗೆ:https://bit.ly/3xsWg1kಮಾಹಿತಿಗೆ:https://kannada.bmrc.co.in/ಅರ್ಜಿ ಸಲ್ಲಿಸಬೇಕಾದ ಸ್ಥಳ: General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560 027 560 027
ವಕೀಲರ ಹುದ್ದೆ ನೇಮಕಾತಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅರ್ಜಿ ಆಹ್ವಾನ

ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seventeen =
Remember me
