ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಾಗುತ್ತಿದ್ದು, ಸಿಎಂ ಸ್ಥಾನ ಯಾರು ಅಲಂಕರಿಸುತ್ತಾರೆ, ಬಿಜೆಪಿ ಹೈಕಮಾಂಡ್​ ಯಾರಿಗೆ ಮಣೆ ಹಾಕುತ್ತೆ? ಎಂಬೆಲ್ಲ ಪ್ರಶ್ನೆಗೆ ಇನ್ನು ಕೆಲವೇ ಗಂಟೆಯಲ್ಲಿ ತೆರೆ ಬೀಳಲಿದೆ.
ಬಿ.ಎಸ್​.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಆಯ್ಕೆ ಮಾಡುವ ಜವಾಬ್ದಾರಿ ಹೈಕಮಾಂಡ್​ ಮೇಲಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮಂಗಳವಾರ ಮಧ್ಯಾಹ್ನ ಉಸ್ತುವಾರಿ ತಂಡ ಆಗಮಿಸಿದೆ. ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ.
ಇಂದು ಸಂಜೆ 7ಕ್ಕೆ ಕ್ಯಾಪಿಟಲ್ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಒಂದಂಶದ ನಿರ್ಣಯ ಸಾಧ್ಯತೆ ಇದೆ. ವರಿಷ್ಠರ ನಿರ್ಧಾರವೇ ಅಂತಿಮವಾಗಲಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಬೆಂಗಳೂರಿಗೆ ಭೇಟಿ ಕೊಡುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್​ ಸಿಂಗ್​, ಬಿ.ಎಸ್. ಯಡಿಯೂರಪ್ಪ ಅವರ ಆಡಳಿತದ ಅನುಭವವನ್ನು ಬಿಜೆಪಿ ಪಕ್ಷ ಬಳಸಿಕೊಳ್ಳಲಿದೆ. ಅವರ ಮಾರ್ಗದರ್ಶನ ಪಡೆಯಲಿದ್ದೇವೆ. ಅವರು 2 ವರ್ಷ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ ಎಂದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ವೇಳೆ ಬಿಎಸ್​ವೈ ಕಣ್ಣೀರಿಟ್ಟಿದ್ದನ್ನು ಸಹಿಸದೆ ಅಭಿಮಾನಿ ನೇಣಿಗೆ ಶರಣು!

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
