ಮೈಸೂರು:ಪುನೀತ್​ ರಾಜ್​ಕುಮಾರ್​ ಮತ್ತು ಪಾರ್ವತಮ್ಮ ರಾಜ್‍ಕುಮಾರ್ ಅವರ ಹೆಸರಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎರಡು ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಘೋಷಣೆ ಮಾಡಿದರು.
ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್​ ರಾಜ್​ಕುಮಾರ್(ಮರಣೋತ್ತರ) ಅವರಿಗೆ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಸ್ವೀಕರಿಸಿದರು. ಇದೇ ವೇಳೆ ಮಾತನಾಡಿದ ಅಶ್ವಿನಿ, ಡಾ.ಪುನೀತ್ ರಾಜ್​ಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್​ ಅವರ ಸ್ಮರಣಾರ್ಥ ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2 ಚಿನ್ನದ ಪದಕ ನೀಡುವುದಾಗಿ ಹೇಳಿದರು. ಪುನೀತ್​ ಅವರ ಹೆಸರಲ್ಲಿ ಲಲಿತಾಕಲಾ ವಿಭಾಗಕ್ಕೆ ಒಂದು ಚಿನ್ನದ ಪದಕ, ಪಾರ್ವತಮ್ಮ ರಾಜ್​ಕುಮಾರ್​ ಅವರ ಹೆಸರಿನಲ್ಲಿ ಬಿಸಿನೆಸ್ ಮ್ಯಾನೇಜ್‌ಮೆಂಟ್‌ ವಿಭಾಗಕ್ಕೆ ಒಂದು ಚಿನ್ನದ ಪದಕ ಸ್ಥಾಪಿಸುವುದಾಗಿ ಘೋಷಿಸಿದರು. ಆಯಾ ವಿಭಾಗದಲ್ಲಿ ರ್ಯಾಂಕ್​ ಪಡೆದ ವಿದ್ಯಾರ್ಥಿಗಳಿಗೆ ಪದಕ ಕೊಡಲಾಗುತ್ತದೆ.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್​ನಲ್ಲಿ ಮಂಗಳವಾರ ನಡೆದ ಘಟಿಕೋತ್ಸವ ಸಮಾರಂಭಕ್ಕೆ ಡಾ.ರಾಜ್​ಕುಮಾರ್ ಕುಟುಂಬಸ್ಥರು ಆಗಮಿಸಿದ್ದರು. ನಟ ರಾಘವೇಂದ್ರ ರಾಜ್​ಕುಮಾರ್ ಮತ್ತು ಪತ್ನಿ ಮಂಗಳಾ, ನಟ ವಿನಯ್ ರಾಜ್​ಕುಮಾರ್, ಪುನೀತ್​ರ ಅಕ್ಕ ಲಕ್ಷ್ಮೀ ಗೋವಿಂದು ಮತ್ತು ಮೊಮ್ಮಕ್ಕಳು ಉಪಸ್ಥಿತರಿದ್ದರು.
ಇಂದಿನಿಂದ ಅಪ್ಪು ಡಾ. ಪುನೀತ್‌ ರಾಜ್​ಕುಮಾರ್: ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್​ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ

ಮಾತು ಬಾರದ, ಕಿವಿ ಕೇಳದ ಯುವಕನ ಬಾಳು ಬೆಳಗಿದ ಪದವೀಧರೆ! ಮನ ತಟ್ಟುವಂತಿದೆ ವಧುವಿನ ತಂದೆಯ ಆ ಮಾತು

ಇದು JAMES ರಹಸ್ಯ: ನಿಮ್ಮ ಕಣ್ಣಲ್ಲಿ ನೀರು ತರಿಸುತ್ತೆ ಶೈನ್​ ಶೆಟ್ಟಿ ಬಿಚ್ಚಿಟ್ಟ ರೀಲ್​ ಮತ್ತು ರಿಯಾಲಿಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
