ಚಿತ್ರದುರ್ಗ:ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ತೆರಳುತ್ತಿದ್ದವರ ಮೇಲೆ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ.
ಇಂತಹ ಭೀಕರ ಘಟನೆ ರಾ.ಹೆ. 48 ಕಾತ್ರಾಳ್​ ಕೆರೆ ಸೇತುವೆ ಸಂಭವಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗಳೂರು ತಾಲೂಕು ಕೆಳಗೋಟೆ ನಿವಾಸಿಗಳಾದ ಹಾಲಪ್ಪ (70), ರುದ್ರಮ್ಮ (58), ಸಣ್ಣಬಸವರಾಜಪ್ಪ(45) ಮೃತರು. ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ಇವರೆಲ್ಲರೂ ಬುಧವಾರ ಮಧ್ಯಾಹ್ನ ಆಟೋದಲ್ಲಿ ತೆರಳುತ್ತಿದ್ದರು.
ಕೆಳಗೋಟೆ ಗ್ರಾಮದ 10 ಜನರಿದ್ದ ಪ್ಯಾಸೆಂಜರ್​ ಆಟೋಕ್ಕೆ ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಈಚರ್​ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರಲ್ಲಿ ಹಾಲಪ್ಪ ಜಿಲ್ಲಾಸ್ಪತ್ರೆಯಲ್ಲಿ, ರುದ್ರಮ್ಮ ಬಸವೇಶ್ವರ ಆಸ್ಪತ್ರೆಯಲ್ಲಿ ಹಾಗೂ ಸಣ್ಣ ಬಸವರಾಜಪ್ಪ ಮಣಿಪಾಲ್​ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರಕರಣ ದಾಖಲಿಸಿರುವ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ, ಗ್ರಾಮಾಂತರ ಪಿಐ ಬಾಲಚಂದ್ರನಾಯಕ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ಕಾರನ್ನು ಓವರ್​ಟೇಕ್​ ಮಾಡಿದ್ದಕ್ಕೆ ಹಲ್ಲೆ: ಹೆಲ್ಪ್​ಲೈನ್​ಗೆ ಕರೆ ಮಾಡಿದ್ರೂ ಸ್ಪಂದಿಸಲಿಲ್ಲ… ವಿಡಿಯೋ ಮೂಲಕ ಮಹಿಳೆ ಆಕ್ರೋಶ

ಗಣಪತಿ ಕೆರೆಗೆ ಹಾರಿ ವೈದ್ಯೆ ಆತ್ಮಹತ್ಯೆ! ಸಾವಿನ ಮನೆಯ ಕದ ತಟ್ಟುವ ಕೊನೇ ಗಳಿಗೆಯೂ ಕರ್ತವ್ಯ ನಿರ್ವಹಿಸಿದ್ದರು

ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twenty =
Remember me
