ಬೆಂಗಳೂರು:ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆಯಾಗಿದ್ದಾರೆ.
ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ಎಂಎಲ್​ಸಿ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ.11ರಂದು ಮತದಾನ ನಡೆಯಬೇಕಿತ್ತು. ಆದರೆ, ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅಖಾಡಕ್ಕಿಳಿದರೆ, ಕಾಂಗ್ರೆಸ್​ ಮತ್ತು ಜೆಡಿಎಸ್​ನಿಂದ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ ವಿಧಾನಸಭೆ ಕಾರ್ಯದರ್ಶಿಯೂ ಆದ‌ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಬಾಬುರಾವ್ ಚಿಂಚನಸೂರ್ ಹೆಸರನ್ನು ಅವಿರೋಧ ಆಯ್ಕೆಯನ್ನಾಗಿ ಗುರುವಾರ ಘೋಷಣೆ ಮಾಡಿದರು.
ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್​ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. 2024ರ ಜೂನ್ 17ರ ವರೆಗೂ ಎಂಎಲ್​ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಬಾಬುರಾವ್ ಚಿಂಚನಸೂರ್ ಆಯ್ಕೆಯಾದರು.
ಶಿವಮೊಗ್ಗದಲ್ಲಿ ಅಪ್ರಾಪ್ತೆಗೆ ತಾಳಿಭಾಗ್ಯ ನೀಡಲು ಯತ್ನ: ಒಮ್ಮೆ ಬಚಾವ್​ ಆಗಿದ್ದ ಪ್ರಿಯಕರ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದ

ದೆಹಲಿಗೆ ತೆರಳಿದ್ದ ಚಿಂಚೋಳಿ ಮೂಲದ ಬಿಜೆಪಿ ಮುಖಂಡ ಹೃದಯಾಘಾತದಿಂದ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + ten =
Remember me
