ಬಾಗಲಕೋಟೆ:ಮಾಜಿ ಸಂಸದ ಎಚ್​.ಬಿ. ಪಾಟೀಲ ಅವರು ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು. ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.
1942ರ ಮಾರ್ಚ್​ 29ರಂದು ಜನಿಸಿದ ಎಚ್​.ಬಿ. ಪಾಟೀಲ ಅವರು ಸ್ವಗ್ರಾಮದಲ್ಲಿ ಪ್ರಾಥಮಿಕ, ರಾಮದುರ್ಗದಲ್ಲಿ ಮಾಧ್ಯಮಿಕ ಶಿಕ್ಷಣ ಪಡೆದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ(ಎಂಎ) ಪದವಿ ಪಡೆದಿದ್ದರು. ಶಿಕ್ಷಣ ನಂತರ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ನಂತರ ಸ್ನೇಹಿತರ ಒತ್ತಾಯಕ್ಕೆ ಮಣಿದು ಬಾದಾಮಿ ತಾಲೂಕು ಬೋರ್ಡ್​ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದರು.
ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 1984ರ ಡಿಸೆಂಬರ್​ನಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯಥಿರ್ಯಾಗಿ ಸ್ಪರ್ಧಿಸಿದ್ದ ಗೆಲುವು ಸಾಧಿಸಿದ್ದರು.
ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ

ವಿದೇಶದಲ್ಲಿರುವೆ, ಬೆಂಗಳೂರಿಗೆ ಬಂದು ಮದ್ವೆ ಆಗ್ತೀನಿ… ಎಂದು ಯುವತಿಗೆ ಆಸೆ ಹುಟ್ಟಿಸಿದವ ಮಾಡಬಾರದು ಮಾಡಿಬಿಟ್ಟ

ಮಕ್ಕಳಾಗದ ನೋವಿನಲ್ಲಿ ಸಾವಿನ ಮನೆಯ ಕದ ತಟ್ಟಿದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
