ಮಂಗಳೂರು:ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಬಜರಂಗ ದಳ ಕಾರ್ಯಕರ್ತನ ಹತ್ಯೆ ನಂತರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಎಲ್ಲ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸೋಮವಾರ ಬೆಳಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹಾಗೂ ಡಿಸಿಪಿಗಳ ನೇತೃತ್ವದಲ್ಲಿ ನಗರದ ಬಳ್ಳಾಲ್ ಬಾಗ್ ವೃತ್ತ, ಎಂ.ಜಿ. ರಸ್ತೆ, ಕೆ.ಎಸ್.ರಾವ್ ರೋಡ್, ಹಂಪನಕಟ್ಟೆ ಪ್ರದೇಶದಲ್ಲಿ ಪೊಲೀಸರ ರೂಟ್ ಮಾರ್ಚ್ ನಡೆಯಿತು.
ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಟೀ ಕುಡಿಯುತ್ತಾ ನಿಂತಿದ್ದ ಕೊಸೀಗೆಹಟ್ಟಿಯ ಹರ್ಷಶೆಟ್ಟಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬರ್ಬರವಾಗಿ ಕೊಂದಿದ್ದರು. ಇದರ ಬೆನ್ನಲ್ಲೇ ಖಾಸಗಿ ಬಸ್ ನಿಲ್ದಾಣದ ಬಳಿ ಕಿಡಿಗೇಡಿಗಳು ವಾಹನಗಳು, ಅಂಗಡಿ‌ಮುಂಗಟ್ಟುಗಳಿಗೆ ಕಲ್ಲು ತೂರಾಟ ನಡೆಸಿದ್ದು, ನಗರದಲ್ಲಿ‌ ರಾತ್ರಿ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿತ್ತು.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಆರೋಪಿಗಳ ಸುಳಿವು ಸಿಕ್ಕಿದೆ, ಶಿಕ್ಷೆ ಕೊಡಿಸುತ್ತೇವೆ ಎಂದ ಗೃಹ ಸಚಿವ

ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ: ಮೈಸೂರಿನ ಬಳಿಕ ತುಮಕೂರಲ್ಲೂ ದುರಂತ

ಕಂಡ ಕಂಡವರ ಮೊಬೈಲ್​ಗೆ ಹಗಲು-ರಾತ್ರಿ ಎನ್ನದೆ ಬೆತ್ತಲೆ ಫೋಟೋ ಕಳಿಸಿ ಖುಷಿ ಪಡ್ತಿದ್ದ… ಈತ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:eighteen + 13 =
Remember me
