ಬೆಂಗಳೂರು:ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ನಗರದ ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ಅವರ ಉಪ್ಪಾರಪೇಟೆಯಲ್ಲಿರುವ ಕಚೇರಿಯಲ್ಲಿ ಲಯನ್ಸ್ ರಕ್ತ ನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆದಿದ್ದು, 75 ಪೊಲೀಸರು ಸ್ವಯಂ ಪ್ರೇರಿತವಾಗಿ ಬಂದು ರಕ್ತದಾನ ಮಾಡಿದ್ದಾರೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಹಲವು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ರಕ್ತದ ಅವಶ್ಯಕತೆಯಿದ್ದು, ರಕ್ತದಾನ ಮಾಡುವಂತೆ ಆಸ್ಪತ್ರೆಯವರು ಕೋರಿದ್ದರು. ಇದಕ್ಕೆ ಸ್ಪಂದಿಸಿದ ಪಶ್ಚಿಮ ವಿಭಾಗದ ಪೊಲೀಸರು, ಕೆಲಸದ ಒತ್ತಡದ ನಡುವೆಯೂ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ವಿಭಾಗದ ಹಲವು ಠಾಣೆಗಳ ಇನ್​ಸ್ಪೆಕ್ಟರ್, ಪಿಎಸ್​ಐ, ಎಎಸ್​ಐ, ಹೆಡ್​ಕಾನ್​ಸ್ಟೆಬಲ್ ಹಾಗೂ ಕಾನ್​ಸ್ಟೆಬಲ್ ಸೇರಿ ಒಟ್ಟು ನೂರಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇವರ ಕಾರ್ಯಕ್ಕೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಈ ಶಿಬಿರ ಆಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

PHOTOS| ಬೆಂಗಳೂರಿಗರೇ, ಈ ರಸ್ತೆಗೆ ಹೋಗೋಕು ಮುನ್ನ ಎಚ್ಚರ! ಗಂಟೆಗಟ್ಟಲೇ ಟ್ರಾಫಿಕ್ ಜಾಮ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 4 =
Remember me
