ಬೆಂಗಳೂರು:ನವದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ನೆನಪಿಸುವಂತಹ ಮತ್ತೊಂದು ಅಮಾನುಷ ಕೃತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತಾದರೂ ದೇಶದ ಈಶಾನ್ಯ ಭಾಗ ಮತ್ತು ಬಾಂಗ್ಲಾದೇಶದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಇದೀಗ ಗ್ಯಾಂಗ್​ ರೇಪ್​ ಆರೋಪಿಗಳು ಬೆಂಗಳೂರು ಪೊಲೀಸರಿಂದ ಗುಂಡೇಟು ತಿಂದಿದ್ದಾರೆ.
ರಾಮಮೂತಿರ್ನಗರದ ಎನ್​ಆರ್​ಐ ಲೇಔಟ್​ನಲ್ಲಿ 10 ದಿನಗಳ ಹಿಂದೆ 22 ವರ್ಷದ ಬಾಂಗ್ಲಾ ಯುವತಿ ಮೇಲೆ ಇಬ್ಬರು ಮಹಿಳೆಯರ ಸಮ್ಮುಖದಲ್ಲೇ ನಾಲ್ವರು ಯುವಕರ ತಂಡ ಸಾಮೂಹಿಕ ಅತ್ಯಾಚಾರವೆಸಗಿ, ಯುವತಿಯ ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ಮೃಗೀಯವಾಗಿ ವರ್ತಿಸಿತ್ತು. ಆ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದರು. ಈ ವಿಡಿಯೋ ವೈರಲ್​ ಬೆನ್ನಲ್ಲೇ ಅಸ್ಸಾಂ ಯುವತಿ ಮೇಲೆ ಬಾಂಗ್ಲಾ ಯುವಕರ ಅತ್ಯಾಚಾರ ನಡೆದಿದೆ ಎಂಬ ಸುದ್ದಿ ಈಶಾನ್ಯ ಭಾರತದಲ್ಲಿ ವೈರಲ್​ ಆಗಿದ್ದು, ಜನಾಂಗೀಯ ಕಿಚ್ಚು ಹಚ್ಚಿದೆ.ಇದನ್ನೂ ಓದಿರಿನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…
ಈ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಪೊಲೀಸರು, 5 ಮಂದಿಯನ್ನ ನಿನ್ನೆ(ಗುರುವಾರ) ಬಂಧಿಸಿದ್ದಾರೆ. ಇಂದು(ಶುಕ್ರವಾರ) ಬೆಳಗ್ಗೆ ಸ್ಥಳ ಮಹಜರಿಗೆ ಆರೋಪಿಗಳಿಬ್ಬರನ್ನು ಪೊಲೀಸರು ಕರೆದೊಯ್ದಿದ್ದರು. ಆ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್​ ಆಗಲು ಯತ್ನಿಸಿದ್ದು, ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗುಂಡೇಟು ಬಿದ್ದು ಗಾಯಗೊಂಡ ರಿದಯ್ ಬಾಬು ಹಾಗೂ ಸಾಗರ್ ಎಂಬ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ
ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!
ಕರೊನಾಗೆ ತಾಯಿ ಬಲಿ, ಅಮ್ಮನ ಶವದ ಮುಂದೆಯೇ ಮದ್ವೆಯಾದ ಮಗ! ಕಣ್ಣೀರು ತರಿಸುತ್ತೆ ಈ ಸ್ಟೋರಿ
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ
ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
