ಬೆಂಗಳೂರು:ನಗರದಲ್ಲಿ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆ ಮತ್ತು ಶೆಡ್​ಗಳನ್ನು ಮಂಗಳವಾರ ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ನೆಲಸಮ ಮಾಡಿದ ಬಿಡಿಎ ಅಧಿಕಾರಿಗಳು, 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನ ವಶಕ್ಕೆ ಪಡೆದಿದ್ದಾರೆ.
ಎಚ್​ಬಿಆರ್ ಬಡಾವಣೆಯ 2ನೇ ಹಂತದ ನಾಗವಾರದಲ್ಲಿ ಸರ್ವೇ ನಂ.75ರಲ್ಲಿ ಒಂದೂಕಾಲು ಎಕರೆ ಜಾಗ ಬಿಡಿಎ ಸ್ವಾಧೀನಕ್ಕೆ ಒಳಪಟ್ಟಿದ್ದರೂ ಬಿಟ್ಟುಕೊಡದೆ ಭೂ ಮಾಲೀಕರು ಆ ಜಾಗದಲ್ಲಿ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆ ಮತ್ತು ಶೆಡ್ ನಿರ್ಮಿಸಿದ್ದರು. ಸದರಿ ಸರ್ವೇ ನಂಬರ್​ನಲ್ಲಿ 6 ಎಕರೆ ಜಮೀನನ್ನು ಎಚ್​ಬಿಆರ್ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ 1989ರಲ್ಲಿ ಬಿಡಿಎ ಸ್ವಾಧೀನ ಪಡಿಸಿಕೊಂಡಿತ್ತು. ಈ ಪೈಕಿ ಒಂದೂವರೆ ಎಕರೆ ಜಾಗವನ್ನು ವರ್ತುಲ ರಸ್ತೆಗೆ ಬಳಸಿಕೊಳ್ಳಲಾಗಿತ್ತು. ಉಳಿದ ನಾಲ್ಕೂವರೆ ಎಕರೆ ಪೈಕಿ ಒಂದೂವರೆ ಎಕರೆ ಜಾಗವನ್ನು ಮಾಲೀಕರು ಬಿಟ್ಟುಕೊಟ್ಟಿರಲಿಲ್ಲ. ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989ರಲ್ಲಿ ಸಿಟಿ ಸಿವಿಲ್ ಕೋರ್ಟ್​ನ ಮೆಟ್ಟಿಲೇರಿದ್ದರು. ತೀರ್ಪು ಬಿಡಿಎ ಪರವಾಗಿ ಬಂದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಹೋಗಿದ್ದರು. ಅಲ್ಲಿಯೂ ಅವರಿಗೆ ಸೋಲಾಗಿತ್ತು. ಆದರೂ ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ಜಾಗ ತೆರವು ಮಾಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15ಕ್ಕೂ ಹೆಚ್ಚು ಜೆಸಿಬಿ ಬಳಸಿ 15 ವಾಣಿಜ್ಯ ಮಳಿಗೆ ಹಾಗೂ ಶೆಡ್​ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

ಪೊಲೀಸ್​ ಬಂದೋಬಸ್ತ್​:ಈ ಹಿಂದೆ ಮೂರ್ನಾಲ್ಕು ಬಾರಿ ಕಟ್ಟಡಗಳನ್ನು ನೆಲಸಮ ಮಾಡಲು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ನೆಲಸಮ ಕಾರ್ಯಾಚರಣೆ ನಡೆಸಿದರು.
ಎಚ್​.ಬಿ.ಆರ್., ಎಚ್.ಎಸ್.ಆರ್. ಬಡಾವಣೆಗಳು ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಮಾಹಿತಿಗಳು ಇವೆ. ಈ ಹಿನ್ನೆಲೆಯಲ್ಲಿ ಒತ್ತುವರಿದಾರರು ಬಿಡಿಎ ಜಾಗವನ್ನು ಸ್ವಯಂಪ್ರೇರಿತವಾಗಿ ಕೂಡಲೇ ಬಿಟ್ಟುಕೊಡಬೇಕು. ಇಲ್ಲವಾದರೆ, ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸದರಿ ಜಾಗಗಳನ್ನು ವಶ ಪಡಿಸಿಕೊಳ್ಳಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾದರೂ ಮಣಿಯಬೇಡಿ. ಅದನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ವಿಶ್ವನಾಥ್​ ತಿಳಿಸಿದರು.
ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ

ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 7 =
Remember me
