ಬೆಂಗಳೂರು:ಜೆಜೆ ನಗರದ ಹಳೆಗುಡ್ಡದ ಪ್ರದೇಶದಲ್ಲಿ ಕಲೆದ ಮಾ.4ರ ರಾತ್ರಿ ಕೊಲೆಯಾದ ಯುವಕ ಚಂದ್ರಶೇಖರ್ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು 179 ಪುಟಗಳ ಚಾರ್ಜ್​ಶೀಟ್‌ ಸಲ್ಲಿಸಿದ್ದು, ಕೊಲೆಗೆ ಕಾರಣ ಏನೆಂಬುದು ಬಯಲಾಗಿದೆ. ಭಾಷೆ ವಿಚಾರಕ್ಕೇ ಚಂದ್ರು ಕೊಲೆ ನಡೆದಿದೆ ಎಂಬ ಆಘಾತಕಾರಿ ವಿಷಯ ಇದರಲ್ಲಿದೆ. ಸಾವಿಗೆ ಬೈಕ್​ ಅಪಘಾತ ಕಾರಣವಲ್ಲ, ಉರ್ದು ಭಾಷೆಯಲ್ಲಿ ಮಾತಾಡಲಿಲ್ಲ ಅನ್ನೋದೇ ಚಂದ್ರು ಕೊಲೆಗೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಏನಿದು ಪ್ರಕರಣ?:ಕಾಟನ್​ಪೇಟೆಯ ಜೈಮಾರುತಿನಗರ ನಿವಾಸಿ ಚಂದ್ರಶೇಖರ್ (22) ಎಂಬಾತನನ್ನು ಮಾ.4ರ ತಡರಾತ್ರಿ ಕೊಲೆ ಮಾಡಲಾಗಿತ್ತು. ಆರೋಪಿ ಶಾಹಿದ್​ ಸೇರಿ ಹಲವರನ್ನು ಜೆ.ಜೆ. ನಗರ ಪೊಲೀಸರು ವಶಕ್ಕೆ ಬಂಧಿಸಿದ್ದರು. ಗೂಡ್ಸ್​ಶೆಡ್​ ರಸ್ತೆಯಲ್ಲಿರುವ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ಚಂದ್ರು ಉದ್ಯೋಗ ತರಬೇತಿ ಪಡೆಯುತ್ತಿದ್ದ. ಸ್ನೇಹಿತ ಸೈಮನ್​ ಹುಟ್ಟುಹಬ್ಬ ಆಚರಿಸಲು ಮಾ.4ರ ರಾತ್ರಿ ಆತನ ಮನೆಗೆ ಹೋಗಿದ್ದ. ಆ ವೇಳೆ ಚಿಕನ್​ ರೋಲ್​ ತರಲೆಂದು ಸೈಮನ್ ಮತ್ತು ಚಂದ್ರು ಇಬ್ಬರೂ ತಡರಾತ್ರಿ ಬೈಕ್​ನಲ್ಲಿ ಜೆ.ಜೆ. ನಗರಕ್ಕೆ ಹೋಗಿದ್ದರು. ಹಳೇಗುಡ್ಡದಹಳ್ಳಿಯ ಕಾವೇರಿ ಆಶ್ರಮ ಶಾಲೆ ಸಮೀಪ ನಿಯಂತ್ರಣ ತಪ್ಪಿದ ಚಂದ್ರುವಿನ ಬೈಕ್​ ಮುಂದಿನಿಂದ ಬರುತ್ತಿದ್ದ ಶಾಹಿದ್​ ಬೈಕ್​ಗೆ ಡಿಕ್ಕಿ ಹೊಡೆದಿತ್ತು. ಯಾರಿಗೂ ಗಾಯಗಳಾಗಿರಲಿಲ್ಲ.
ಈ ವೇಳೆ ಸರಿಯಾಗಿ ಬೈಕ್​ ಚಲಾಯಿಸುವಂತೆ ಶಾಹಿದ್​ಗೆ ಚಂದ್ರು ಬೆದರಿಸಿದ್ದ. ಇದರಿಂದ ಕೆರಳಿದ ಶಾಹಿದ್​, ತನ್ನ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿ ಚಂದ್ರು ಹಾಗೂ ಸೈಮನ್​ ಜತೆ ಜಗಳ ಮಾಡಿದ್ದ. ಜಗಳ ವಿಕೋಪಕ್ಕೆ ತಿರುಗಿ ಶಾಹಿದ್​ ತನ್ನ ಬಳಿಯಿದ್ದ ಚೂರಿಯಿಂದ ಚಂದ್ರು ತೊಡೆಗೆ ಇರಿದು ಪರಾರಿಯಾಗಿದ್ದ. ಭೀರವಾಗಿ ಗಾಯಗೊಂಡಿದ್ದ ಚಂದ್ರುವನ್ನು ಗೆಳೆಯ ಸೈಮನ್​ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದನಾದರೂ ಬದುಕಲಿಲ್ಲ.
ಬೈಕ್​ ಡಿಕ್ಕಿಯಾಗಿದ್ದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ಗಲಾಟೆ ವೇಳೆ ಉರ್ದು ಭಾಷೆಯಲ್ಲಿ ಮಾತಾಡುವಂತೆ ಶಾಹಿದ್​ ತಂಡ ಹೇಳಿದೆ. ಈ ವೇಳೆ ಉರ್ದು ಬರಲ್ಲ ಎಂದು ಕನ್ನಡದಲ್ಲೇ ಮಾತನಾಡಿದ ಚಂದ್ರುವನ್ನ ಚುಚ್ಚಿ ಕೊಲ್ಲಲಾಗಿದೆ ಎಂದು ಹೋಂ ಮಿನಿಸ್ಟರ್​ ಮತ್ತು ಸಿ.ಟಿ.ರವಿ ಹೇಳಿದ್ದರು. ಈ ಪ್ರಕರಣ ವಿವಾದದ ಸ್ವರೂಪ ಪಡೆದಿತ್ತು. ಇದರ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಹೋಂ ಮಿನಿಸ್ಟರ್​ ಹಿಂಪಡೆದಿದ್ದರು. ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿತ್ತು.
ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಇದೀಗ ಚಾರ್ಜ್​ಶೀಟ್​ ಸಲ್ಲಿಸಿದ್ದು, ಚಂದ್ರು ಸಾವಿಗೆ ಕಾರಣ ಏನೆಂದು ತಿಳಿಸಿದ್ದಾರೆ.
ಚಂದ್ರು ಕೊಲೆ ಕೇಸ್​: ಪೊಲೀಸರು ಮತ್ತು ಅರಗ ಜ್ಞಾನೇಂದ್ರ- ಸಿ.ಟಿ.ರವಿ ಹೇಳಿಕೆ… ಒಂದಕ್ಕೊಂದು ಸಂಬಂಧವೇ ಇಲ್ಲ

ಹುಟ್ಟಿನಿಂದ ಕಷ್ಟದಲ್ಲೇ ಬೆಳೆದ ಬಾಲೆಯ ಮೊಗದಲ್ಲಿ ನಗು ಅರಳಿಸಿದ ದಾವಣಗೆರೆ ಎಸ್ಪಿ! ಈ ಸ್ಟೋರಿ ಕೇಳಿದ್ರೆ ಭಾವುಕರಾಗ್ತೀರಿ

ಮಾಡದ ತಪ್ಪಿಗೆ ಯುವಕ ಬಲಿ, ಪಿಎಸ್​ಐ ಅಮಾನತು: ಮೃತದೇಹದ ಬಳಿ ಸಿಕ್ಕ ಕವರ್​ನಲ್ಲಿದೆ ಮಹತ್ವದ ಸಾಕ್ಷ್ಯ

ಊರಿಗೆ ಹೋಗ್ಬೇಕಿತ್ತು.. ಅದ್ಕೆ ರಸ್ತೆಬದಿ ನಿಂತಿದ್ದ ಬಸ್​ ಓಡಿಸಿಕೊಂಡು ಬಂದೆ… ಈತನ ಮಾತು ಕೇಳಿ ಮಾಲೀಕ ದಿಗ್ಭ್ರಾಂತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × four =
Remember me
