ಬೆಂಗಳೂರು:ಮದುವೆ ಆಗುವುದಾಗಿ ಆಮಿಷವೊಡ್ಡಿ ಕಲಬುರಗಿಯಿಂದ ಬೆಂಗಳೂರಿಗೆ ಕರೆಸಿಕೊಂಡು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಡಿಟೆಕ್ಟಿವ್​ ಸಬ್​ಇನ್​ಸ್ಪೆಕ್ಟರ್​​ನನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿಐಡಿ ಘಟಕದಲ್ಲಿ ಇರುವ ಡಿಟೆಕ್ಟಿವ್​ ಸಬ್​ಇನ್​ಸ್ಪೆಕ್ಟರ್​ ಬಂಧಿತ. 545 ಪಿಎಸ್​ಐ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆ ಕರ್ತವ್ಯದ ಮೇಲೆ ಸಬ್​ಇನ್​ಸ್ಪೆಕ್ಟರ್​, ಬೆಂಗಳೂರಿಂದ ಕಲಬುರಗಿಗೆ ಹೋಗಿದ್ದಾಗ ಯುವತಿಯೊಬ್ಬಳ ಪರಿಚಯವಾಗಿದೆ. ಇಬ್ಬರ ನಡುವೆ ಆತ್ಮೀಯತೆ ಬೆಳೆದು ಆಕೆಯನ್ನು ಬೆಂಗಳೂರಿಗೆ ಕರೆಸಿಕೊಂಡ ಸಬ್​ಇನ್​ಸ್ಪೆಕ್ಟರ್​, ದಕ್ಷಿಣ ವಿಭಾಗ ವ್ಯಾಪ್ತಿಯ ಖಾಸಗಿ ಹೋಟೆಲ್​ನಲ್ಲಿ ಏಕಾಂತವಾಗಿ ಉಳಿದುಕೊಂಡಿದ್ದರು. ಇದಾದ ಮೇಲೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ. ಮದುವೆ ಆಗುವಂತೆ ಯುವತಿ ಒತ್ತಾಯ ಮಾಡಿದಾಗ ಸಬ್​ಇನ್​ಸ್ಪೆಕ್ಟರ್​ ನಿರಾಕರಿಸಿದ್ದಾರೆ.
ನೊಂದ ಯುವತಿ, ಹಿರಿಯ ಪೊಲೀಸ್​ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಮಹಿಳಾ ಪೊಲೀಸ್​ ಠಾಣೆಗೆ ದೂರು ನೀಡುವಂತೆ ತಿಳಿಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದರ ಮೇರೆಗೆ ಎಫ್​​ಐಆರ್​ ದಾಖಲಿಸಿದ ಬಸವನಗುಡಿ ಮಹಿಳಾ ಠಾಣೆ ಪೊಲೀಸರು, ಸಿಐಡಿ ಆವರಣದಲ್ಲಿ ಕರ್ತವ್ಯದಲ್ಲಿದ್ದ ಡಿಟೆಕ್ಟಿವ್​ ಸಬ್​ಇನ್​ಸ್ಪೆಕ್ಟರ್​ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

ರಾಜ್ಯಕ್ಕೆ ಚಂಡಮಾರುತ ಭೀತಿ: ಇನ್ನಷ್ಟು ಬಿರುಸುಗೊಳ್ಳಲಿದೆ ಮಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + five =
Remember me
