ಯಲ್ಲಾಪುರ:ಪಟ್ಟಣದ ಬ್ಯಾಂಕ್​ ಆಫ್​ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನು ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿಯ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ ಮೋಸವೆಸಗಿರುವ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್​ ಆಫ್​ ಬರೋಡಾ ಸ್ಥಳೀಯ ಶಾಖೆಯ ಸಹಾಯಕ ವ್ಯವಸ್ಥಾಪಕ, ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ 2022ರ ಏಪ್ರಿಲ್​ 7ರಿಂದ ಸೆ.9ರವರೆಗಿನ ಅವಧಿಯಲ್ಲಿ ಮೋಸದಿಂದ ಹಣ ವರ್ಗಾವಣೆ ಮಾಡಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಲಾಗಿನ್​ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಾಲಾದ ಎಸ್​ಬಿಐ ಶಾಖೆಯಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆ ಅವರ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ.
ರೋಗಿಯ ಜೀವ ಉಳಿಸಲು ಬೆಂಗಳೂರಿನ ಟ್ರಾಫಿಕ್​ನಲ್ಲಿ 3 ಕಿ.ಮೀ. ಓಡಿದ ಡಾಕ್ಟರ್​! ವಿಡಿಯೋ ವೈರಲ್​, ಎಲ್ಲೆಡೆ ಮೆಚ್ಚುಗೆ

ಪುಸ್ತಕದೊಳಗೇ ಹಾವು! ಮನೆಯ ಟೇಬಲ್​ ಮೇಲಿದ್ದ ಪುಸ್ತಕದಲ್ಲಿ ಬೆಚ್ಚಗೆ ಮಲಗಿದ್ದ ಹಾವು…

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಟ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:thirteen − 10 =
Remember me
