ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಇದೇ 21ರಿಂದ ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಮಿತಿ ಮುಖಂಡರ ಜತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಬಾರಿ ಗಡುವು ಕೊಟ್ಟರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದೆವು. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಆದ್ದರಿಂದ ಈಗ ಅನಿವಾರ್ಯವಾಗಿ ಹೋರಾಟ ಆರಂಭಿಸುತ್ತಿದ್ದೇವೆ ಎಂದರು.
ಪಂಚಮಸಾಲಿ, ಲಿಂಗಾಯತ ಗೌಡ, ಮಲಯಗೌಡ, ದೀಕ್ಷ ಲಿಂಗಾಯತರು ಸೇರಿ ಹೋರಾಟ ನಡೆಸಲಾಗುವುದು. ಮೊದಲು ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ತಾಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುವುದು. ಮೇ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು. ಅದಕ್ಕೂ ಸರ್ಕಾರ ಮಣಿಯದಿದ್ದರೆ ಬೆಂಗಳೂರಿನಲ್ಲಿ ಬೃಹತ್‌ ಹೋರಾಟ ಆರಂಭಿಸಲಾಗುವುದು ಎಂದು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಭರವಸೆ ಇತ್ತು. ಆದರೆ, ನಂಬಿಕೆ ಹುಸಿಯಾಗಿದೆ. ಜನರಲ್ಲಿ ಅಸಮಾಧಾನ ಉಂಟಾಗಿದೆ. ಆದ್ದರಿಂದಲೇ ಐದು ಹಂತದ ಹೋರಾಟ ಆರಂಭಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರಿಸುವ ಆದೇಶ ಹೊರಬೀಳುವವರೆಗೆ ವಿರಮಿಸುವುದಿಲ್ಲ ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದು ಪ್ರವರ್ಗ 2-ಎ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆಯೋಗದಿಂದ ವರದಿ ಪಡೆಯಲು ಒಂದು ವರ್ಷ ಬೇಕಿದೆಯೇ? ಕೋವಿಡ್‌ ಮತ್ತಿತರ ಕಾರಣಗಳನ್ನು ನೀಡುತ್ತಾ ಕಾಲಹರಣ ಮಾಡಲಾಗುತ್ತಿದೆ. ಈ ನಿಲುವು ವಿರೋಧಿಸಿ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಒಬ್ಬರು ಮಾತ್ರ ದೂರ:ಪಂಚಮಸಾಲಿ ಸಮುದಾಯದ ಶಾಸಕರು, ಸಚಿವರು ಮತ್ತು ಸಂಸದರ ಪೈಕಿ ಒಬ್ಬರು ಮಾತ್ರ ಈ ಹೋರಾಟದಿಂದ ದೂರ ಇದ್ದಾರೆ. ಅವರಿಗೆ ಯಾವ ಅಡ್ಡಿ ಇದೆಯೋ ಗೊತ್ತಿಲ್ಲ. ಉಳಿದ ಎಲ್ಲರೂ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಗಟ್ಟಿಯಾಗಿ ಬೆಂಬಲಕ್ಕೆ ನಿಂತಿದ್ದಾರೆ. ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೂಡ ಬೆಂಬಲಿಸುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.
ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
