ಬೆಂಗಳೂರು:ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕುರಿತು ಹೈಕೋರ್ಟ್​ ಒಳ್ಳೆಯ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು.
ಶಾಂತಿ- ಸೌಹಾರ್ದತೆ ಕಾಪಾಡಬೇಕು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ಇದು ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಪ್ರಶ್ನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಿಜಾಬ್​ ವಿವಾದ ಕುರಿತು ಹೈಕೋರ್ಟ್​ ಪೂರ್ಣ ಪೀಠ ನೀಡಿದ ಮಹತ್ವದ ತೀರ್ಪು ಕುರಿತು ಪ್ರತಿಕ್ರಿಯಿಸಿದ ಸಿಎಂ, ನ್ಯಾಯಾಲಯದ ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರೂ ಸಹಕರಿಸಬೇಕು. ಎಲ್ಲ ವಿದ್ಯಾರ್ಥಿಗಳೂ ಹೈಕೋರ್ಟ್ ಆದೇಶ ಪಾಲಿಸಬೇಕು. ತರಗತಿ ಬಹಿಷ್ಕಾರ ಮಾಡದೆ, ಪರೀಕ್ಷೆಯಲ್ಲಿ ಭಾಗವಹಿಸಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡ್ರೆ ಗೃಹ ಇಲಾಖೆಯಿಂದ ತಕ್ಕಪಾಠ ಆಗಲಿದೆ. ಕಾನೂನು ಸುವ್ಯವಸ್ಥೆ ಕದಡಬೇಡಿ ಎಂದು ಎಚ್ಚರಿಕೆ ನೀಡಿದರು.
ಸಮುದಾಯದ ನಾಯಕರಿಗೂ ನಾನು ಮನವಿ ಮಾಡುವೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದರು.
Koo App
ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳು ಹಿಜಾಬ್ ಕುರಿತು ಇಂದು ನೀಡಿದ ತೀರ್ಪಿನ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭ.
–Basavaraj Bommai (@bsbommai)15 Mar 2022

ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ವಿಚ್ಛೇದನ ಕೇಳಿದ್ದ ಅಪ್ಪ-ಅಮ್ಮನನ್ನು ಜಡ್ಜ್​ ಎದುರೇ ಒಂದುಗೂಡಿಸಿದ ಮಗ! ಶಿವಮೊಗ್ಗದಲ್ಲಿ ಮನಮಿಡಿಯುವ ಘಟನೆ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
