ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಜಂಟಿಯಾಗಿ ಶುಕ್ರವಾರ ಬೆಳಗ್ಗೆ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.
ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರ ಬಳಕೆಗೆ ಕಟ್ಟಡವನ್ನು ಅನುಕೂಲ ಮಾಡಿಕೊಡುವಂತೆ ಹಾಲಿ ಮತ್ತು ಮಾಜಿ ಸಿಎಂಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು.
ಮನೆಯಲ್ಲಿ ಆಟವಾಡುತ್ತಾ ಸೊಳ್ಳೆನಾಶಕ ಲಿಕ್ವಿಡ್​ ಕುಡಿದು 2 ವರ್ಷದ ಮಗು ಸಾವು! ಹೊನ್ನಾವರದಲ್ಲಿ ಘಟನೆ

ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 16 =
Remember me
