ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬರನ್ನ ಬಲಿ ಪಡೆದಿದೆ. 10 ದಿನದ ಹಿಂದಷ್ಟೇ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಅಕ್ಷಯ ಮೇಲೆ ಕಸದ ಲಾರಿ ಹರಿದು ಆಕೆಯ ಸಾವಿಗೆ ಕಾರಣವಾಗಿತ್ತು, ಈ ಕಹಿ ಘಟನೆ ಮಾಟುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಗುರುವಾರ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಸದ ಲಾರಿ ಹರಿದಿದ್ದು, ಸ್ಥಳದಲ್ಲೇ ದರ್ಮಣಕ್ಕೀಡಾಗಿದ್ದಾರೆ.
ರಾಮಯ್ಯ(60) ಮೃತರು. ದ್ವಿಚಕ್ರ ವಾಹನದಲ್ಲಿ ರಾಮಯ್ಯ ಹೋಗುತ್ತಿದ್ದರು. ಬಾಗಲೂರು ಕ್ರಾಸ್ ಬಳಿ ರೇವ ಯೂನಿರ್ವಸಿಟಿ ಮುಂಭಾಗ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಕೆಳಕ್ಕೆ ಬಿದ್ದ ರಾಮಯ್ಯ ಅವರ ಮೇಲೆ ಲಾರಿಯ ಚಕ್ರ ಹರಿದಿದೆ. ಅಪಘಾತದ ಭೀಕರತೆಗೆ ರಾಮಯ್ಯರ ದೇಹ ಛಿದ್ರಗೊಂಡಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಮಾ.21ರಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ 12 ವರ್ಷದ ಬಾಲಕಿ ಅಕ್ಷಯ ಬಿ. ನರಸಿಂಹಮೂರ್ತಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿತ್ತು. ಸ್ಥಳದಲ್ಲೇ ಅಕ್ಷಯ ಮೃತಪಟ್ಟಿದ್ದಳು. ಈ ಘಟನೆ ಖಂಡಿಸಿ ಬಿಬಿಎಂಪಿ ವಿರುದ್ಧ ಮೃತಳ ಕುಟುಂಬಸ್ಥರು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ದುರ್ಘಟನೆ ಇನ್ನೂ ಹಸಿಯಾಗೇ ಇದೆ, ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಬೆಂಗಳೂರಲ್ಲಿ ಭೀಕರ ಅಪಘಾತ: ಕಸದ ಲಾರಿ ಡಿಕ್ಕಿ, ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ದುರ್ಮರಣ

ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
