ರಾಯಚೂರು:ಬಿಕಾಂ ಐದನೇ ಸೆಮಿಸ್ಟರ್​ನ ಲೆಕ್ಕಪತ್ರ ನಿರ್ವಹಣೆ ಪ್ರಶ್ನೆಪತ್ರಿಕೆಯು ಪರೀಕ್ಷೆಗೂ ಮುನ್ನವೇ ಬಹಿರಂಗವಾಗಿದೆ. ಪರಿಣಾಮ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಗುಲ್ಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಗುರುವಾರ ಮಧ್ಯಾಹ್ನ 2ಕ್ಕೆ ಪರೀಕ್ಷೆ ಆರಂಭವಾಗಬೇಕಾಗಿತ್ತು. ಆದರೆ, ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎನ್ನುವ ದೂರು ಕೇಳಿ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಪ್ರಶ್ನೆಪತ್ರಿಕೆ ಬಹಿರಂಗ ಆಗಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ವಿವಿ ಮೌಲ್ಯಮಾಪನ ಕುಲಸಚಿವೆ ಡಾ.ಮೇಧಾವಿನಿ ಕಟ್ಟಿ ಮಧ್ಯಾಹ್ನ 2ಕ್ಕೆ ನಡೆಯಬೇಕಾಗಿದ್ದ ಲೆಕ್ಕಪತ್ರ ನಿರ್ವಹಣೆ ಪರೀಕ್ಷೆಯನ್ನು ಮುಂದೂಡಿದರು. ಉಳಿದ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸೈಬರ್​ ಕೆಮ್​ ವಿಭಾಗಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ. ಲೆಕ್ಕಪತ್ರ ನಿರ್ವಹಣೆ ವಿಷಯದ ಪರೀಕ್ಷೆಗೆ ಶೀಘ್ರವೇ ಬೇರೆ ದಿನಾಂಕ ನಿಗದಿಯಾಗಲಿದೆ.
ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಊಟ ಇಲ್ಲ ಎಂದಿದ್ದಕ್ಕೆ ಸಿಬ್ಬಂದಿಯನ್ನು ಕೂಡಿಹಾಕಿ ಡಾಬಾಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು! ಕೊಪ್ಪಳದಲ್ಲಿ ಅಮಾನವೀಯ ಕೃತ್ಯ

ಹೈದರಾಬಾದ್​ನಲ್ಲಿ ಮೋದಿ, ಬೆಂಗ್ಳೂರಲ್ಲಿ ಕೆಸಿಆರ್! ಪ್ರಧಾನಿಗೆ ಸ್ವಾಗತ ಕೋರಲು ಮನಸು ಮಾಡಲಿಲ್ಲ ಏಕೆ ತೆಲಂಗಾಣ ಸಿಎಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + sixteen =
Remember me
