ಬೆಂಗಳೂರು:ಕತ್ತು ಕೊಯ್ದುಕೊಂಡ‌ ಸ್ಥಿತಿಯಲ್ಲಿ ಇಂಜಿನಿಯರಿಂಗ್​ ಕಾಲೇಜು ವಿದ್ಯಾರ್ಥಿಯೊಬ್ಬನ ಶವ ಹಾಸ್ಟೆಲ್​ನಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ನಿಧಿನ್ (19) ಮೃತ ದುರ್ದೈವಿ. ಕೇರಳ ಮೂಲದ ಈತ, ‌ಡಿ.1ರಂದು ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿಗೆ ಸಿಇಎಸ್ ಪ್ರಥಮ ವರ್ಷಕ್ಕೆ ದಾಖಲಾಗಿದ್ದ. ಕಾಲೇಜಿನ ಕ್ಯಾಂಪಸ್ ಒಳಗಿನ ಹಾಸ್ಟೆಲ್​​ನಲ್ಲಿ ವಾಸವಿದ್ದ. ಹಾಸ್ಟೆಲ್​ನ ಶೌಚಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ನಿನ್ನೆ(ಬುಧವಾರ) ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್​ನ ಸಹಪಾಠಿ ಬಂದು ಬಾಗಿಲು ಬಡಿದರೂ ನಿಧಿನ್​​ ತೆರೆದಿರಲಿಲ್ಲ. ಈ ಬಗ್ಗೆ ಸಹಪಾಠಿ ಹಾಸ್ಟೆಲ್ ವಾರ್ಡನ್​ಗೆ ತಿಳಿಸಿದ್ದ. ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಚಾಕುವಿನಿಂದ ಆತನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.
ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + ten =
Remember me
