ತುಮಕೂರು:‘ಬೇಡ ಜಂಗಮ ಸಮುದಾಯ’ಕ್ಕೆ ಮೀಸಲಾತಿಗೆ ಆಗ್ರಹಿಸಿ ಉತ್ತರ ಕರ್ನಾಟಕದ ಭಾಗದಿಂದ ನೂರಾರು ಬಸ್​ಗಳಲ್ಲಿ ಆಗಮಿಸುತ್ತಿದ್ದ ಪ್ರತಿಭಟನಾಕಾರರನ್ನು ಬೆಂಗಳೂರಿಗೆ ಬರುವ ಮುನ್ನವೇ ಮಾರ್ಗದಲ್ಲೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪೊಲೀಸರು ತಡೆದಿದ್ದು, ರಸ್ತೆಯಲ್ಲೇ ಸಾವಿರಾರು ಮಂದಿ ಪ್ರತಿಭಟನೆಗಿಳಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ಸುಮಾರು 10 ಕಿಮೀ ವರೆಗೂ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ಗುರುವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ‘ಬೇಡ ಜಂಗಮ ಸತ್ಯಪ್ರತಿಪಾದನ ಸತ್ಯಾಗ್ರಹ ಹೋರಾಟ’ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಸಾವಿರಾರು ಮಂದಿ ಬುಧವಾರ ರಾತ್ರಿಯೇ ಜಮಖಂಡಿ, ರಾಯಚೂರು, ಬಾಗಲಕೋಟೆ ಸೇರಿ ಉತ್ತರ ಕರ್ನಾಟಕ ಭಾಗದಿಂದ ಬಸ್​ಗಳಲ್ಲಿ ಹೊರಟಿದ್ದರು. ತುಮಕೂರಿನ ಕಳ್ಳಂಬೆಳ್ಳ ಟೋಲ್ ಬಳಿ ಹೋರಾಟಗಾರರಿದ್ದ 80ಕ್ಕೂ ಹೆಚ್ಚು ಬಸ್, ನೂರಾರು ಕ್ರೂಸರ್ ವಾಹನಗಳನ್ನು ತಡೆದ ಪೊಲೀಸರು, ಬೆಂಗಳೂರಿಗೆ ಹೋಗದಂತೆ ಬಂದೋಬಸ್ತ್​ ಮಾಡಿದ್ದಾರೆ.
ಪೊಲೀಸರ ವರ್ತನೆಗೆ ಆಕ್ರೋಶಗೊಂಡ ಜನರು, ತಮ್ಮ ವಾಹನಗಳನ್ನ ಬಿಡುವಂತೆ ಕಳ್ಳಂಬೆಳ್ಳ ಟೋಲ್‌ ಬಳಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಬೆಳಗಿನ ಜಾವದಿಂದಲೇ 10 ಕಿಲೋ ಮೀಟರ್​ ವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿದೆ. ತುಮಕೂರು ಎಸ್​ಪಿ ನೇತೃತ್ವದಲ್ಲಿ ಟ್ರಾಫಿಕ್ ಜಾಮ್ ಕ್ಲಿಯರ್​ ಮಾಡುವ ಕೆಲಸ ಸಾಗಿದೆ.
ಇನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿಯೂ ಹುಬ್ಬಳ್ಳಿ, ಧಾರಾವಾಡ, ವಿಜಯಪುರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ಗೆ ಪ್ರತಿಭಟನಾಕಾರರನ್ನು ಕರೆದೊಯ್ಯುತ್ತಿದ್ದ 10 ಬಸ್ ಹಾಗೂ 10ಕ್ಕೂ ಹೆಚ್ಚು ಕ್ರೂಸರ್ ವಾಹನಗಳನ್ನು ವಾಹನಗಳನ್ನು ಪೊಲೀಸರು ತಡೆದಿದ್ದಾರೆ. ಬುಧವಾರ ರಾತ್ರಿ ಟೋಲ್ ಮುಂಭಾಗ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸರ್ವೀಸ್ ರಸ್ತಯಲ್ಲೇ ಕುಳಿತು ಜನ ಧರಣಿ ನಡೆಸುತ್ತಿದ್ದಾರೆ.
ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 19 =
Remember me
