ಬೆಳಗಾವಿ:ಪತ್ನಿಯ ಸೀಮಂತಕ್ಕೆಂದು ರಜೆ ಮೇಲೆ ಊರಿಗೆ ತೆರಳುತ್ತಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಯೋಧ ಪ್ರಕಾಶ ಸಂಗೊಳ್ಳಿ (29) ಮೃತರು. ಬೆಳಗಾವಿಯ ಎಂಎಲ್‌ಐಆರ್​ಸಿಯಲ್ಲಿ ಪ್ರಕಾಶ ಅವರು ಕೆಲಸ ಮಾಡುತ್ತಿದ್ದರು. ಜೂ.5ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗಾಗಿ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ, ಗಂಭೀರ ಗಾಯಗೊಂಡ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಶುಕ್ರವಾರ ಬೆಳಗ್ಗೆ ಹೊಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಇಡೀ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ! ನೋಟುಗಳನ್ನ ಆಯ್ದುಕೊಳ್ಳಲು ಮುಗಿಬಿದ್ದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
