ಬಂಟ್ವಾಳ:ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಶಾಸಕರ ಕಾರಿನ ಚಾಲಕ ದೂರು ಕೊಟ್ಟಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿದೆ.
ಅ.14ರಂದು ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಶಾಸಕರು ತೆರಳುತ್ತಿರುವಾಗ ಕಾರಿನಲ್ಲಿ ಹಿಂಬಾಲಿಸಿ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್​ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಮಂಗಳೂರು ನಿವಾಸಿ ರಿಯಾಜ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿತ್ತು. ಈಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿ ಡಿಪಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದಾರೆ. ತನಿಖಾ ದಾಖಲೆಗಳನ್ನು ಸಿಐಡಿಗೆ ತನಿಖಾಧಿಕಾರಿಯೇ ಹಸ್ತಾಂತರಿಸಬೇಕು ಎಂದು ದ.ಕ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ನಿರ್ದೇಶಿಸಲಾಗಿದೆ.
ಅಂದು ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್​ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನ ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದರು. ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.
ಪಿಎಂ ಕಿಸಾನ್ ಸಮ್ಮಾನ್​ ನಿಧಿ: ರಾಜ್ಯದ 50.36 ಲಕ್ಷ ರೈತರಿಗೆ ಸಹಾಯಧನ ಮಂಜೂರು

ಮಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 13 =
Remember me
