
ಬಂಟ್ವಾಳ:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ್ದಾರೆ.
ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್​ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನ ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾರೆ.
ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಶಾಸಕ ಹರೀಶ್​ ಪೂಂಜಾ ಅವರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ
ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವು: ಆಕೆಯನ್ನ ಆಸ್ಪತ್ರೆಗೆ ಕರೆತಂದ ಯುವಕ ಪರಾರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
