ಬೆಂಗಳೂರು:ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೋರ್ವಳು ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ದೂರು ದಾಖಲಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಯುವತಿ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್‌ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ರಂಗನಾಥ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.
ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ​ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರಂತೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ಸೂಕ್ತ ದಾಖಲೆಗಳ ಜೊತೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ತಿಳಿಸಲಾಗಿದೆ.
ಇಷ್ಟು ದುಬಾರಿ ಕೋ-ಆರ್ಡ್ ಸೆಟ್ ಧರಿಸಿ ಪತಿಯ ಮ್ಯಾಚ್ ನೋಡಿದ ಅನುಷ್ಕಾ, ಬೆಲೆ ಕೇಳಿದ್ರೆ ಆಶ್ಚರ್ಯವಾಗುತ್ತೆ..!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
