ದಾವಣಗೆರೆ:ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ… ಎಂದು ಪದೇಪದೆ ಹಿಡಿಶಾಪ ಹಾಕಬೇಕೆನ್ನಿಸುತ್ತೆ ಈ ಕರುಣಾಜನಕ ಸ್ಟೋರಿ ಕೇಳಿದ್ರೆ…
ಚನ್ನಗಿರಿ‌ ತಾಲೂಕಿನ ಸಂತೆಬೆನ್ನೂರು ಗ್ರಾಮದ ನಿವಾಸಿ ರೋಜಾ ತುಂಬು ಗರ್ಭಿಣಿ. ನಾಲ್ಕೈದು ದಿನದಲ್ಲಿ ಹೆರಿಗೆ ಆಗಲಿದ್ದು, ಇಡೀ ಕುಟುಂಬ ಪುಟ್ಟ ಕಂದನ ಸ್ವಾಗತಿಸಲು ಕಾಯುತಿತ್ತು. ರೋಜಾಳ ಗಂಡ ಸುರೇಶ್ ನಾಯ್ಕ ತನ್ನ ಮಗುವನ್ನ ಕಣ್ತುಂಬಿಕೊಳ್ಳಲು ಚಾತಕಪಕ್ಷಿಯಂತೆ ಕಾಯುತ್ತಿದ್ದ.ಇದನ್ನೂ ಓದಿರಿ ಇದನ್ನೂ ಓದಿರಿಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ
ಇಡೀ ಕುಟುಂಬ ಮಗು ಬರುವ ಸಂಭ್ರಮದಲ್ಲಿ ಮಿಂದೇಳಲು ತವಕಿಸುತ್ತಿತ್ತು. ಅಷ್ಟರಲ್ಲಿ ಎಂಟ್ರಿ ಕೊಟ್ಟ ಮಹಾಮಾರಿ ಕರೊನಾ ಸುರೇಶ್​ ನಾಯ್ಕನ ಪ್ರಾಣ ತೆಗೆದಿದೆ! ಮೂಲತಃ ಹೊಳಲ್ಕೆರೆ ತಾಲೂಕಿನ ಐನಹಳ್ಳಿ ಗ್ರಾಮ‌ದ ಸುರೇಶ್ ನಾಯ್ಕ, ಸಂತೆಬೆನ್ನೂರು ಬೆಸ್ಕಾಂ ಲೈನ್‌ ಮನ್ ಆಗಿ ಕೆಲಸ ಮಾಡುತ್ತಿದ್ದ. ಕರೊನಾ ಸೋಂಕು ತಗುಲಿದ್ದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 10 ದಿನಗಳಿಂದ ಸುರೇಶ್​ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಗಂಡ ಗುಣಮುಖವಾಗಿ ಮನೆಗೆ ಬಂದೇ ಬರುತ್ತಾನೆ ಎಂದು ಬರುವ ದಾರಿಯನ್ನೇ ಕಾಯುತ್ತಿದ್ದ ಪತ್ನಿಗೆ ಗಂಡನ ಸಾವಿನ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಜೂನ್ 3ರಂದು ರೋಜಾಗೆ ಹೆರಿಗೆ ದಿನಾಂಕವನ್ನ ವೈದ್ಯರು ಕೊಟ್ಟಿದ್ದಾರೆ.
ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
