ಬಳ್ಳಾರಿ:ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಕಾಂಗ್ರೆಸ್​ ನಾಯಕರೊಬ್ಬರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ಸದ್ಯ ಕರ್ನಾಟಕದಲ್ಲಿದೆ. ಇಂದು ಗಡಿಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್​ನ ಬೃಹತ್​ ಸಮಾವೇಶ ನಡೆಯುತ್ತಿದೆ. ಪಾದಯಾತ್ರೆ ಹಾಗೂ ಸಮಾವೇಶ ಹಿನ್ನೆಲೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದಲೂ ಜನರು ಆಗಮಿಸಿದ್ದಾರೆ. ಹಾಗೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶದ ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ದಾದಾ ಗಾಂಧಿ ಅವರೂ ಆಗಮಿಸಿದ್ದರು. ಆಂಧ್ರ-ಕರ್ನಾಟಕ ಗಡಿ ಗ್ರಾಮ ಹೀರೇಹಾಳ್ ಸಮೀಪ ಪಾದಯಾತ್ರೆ ವೇಳೆ ನಿನ್ನೆ(ಶುಕ್ರವಾರ) ಸಂಜೆ ಎದೆನೋವಿನಿಂದ ಕುಸಿದು ಬಿದ್ದರು.
ಕೂಡಲೇ ಅವರನ್ನ ದಾದಾ ಗಾಂಧಿ ಅವರನ್ನು ಬಳ್ಳಾರಿಯ ಹೃದಯಾಲಯಕ್ಕೆ ಕಾಂಗ್ರೆಸ್ ಕಾರ್ಯಕರ್ಯರು ದಾಖಲಿಸಿದ್ದಾರೆ. ಚಿಕಿತ್ಸೆ ಮುಂದುವರಿದಿದೆ.
ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್​ ಬೃಹತ್​ ಸಮಾವೇಶ: ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
