ಬಳ್ಳಾರಿ:ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬಳ್ಳಾರಿಯಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಕಾಂಗ್ರೆಸ್​ನ ಬೃಹತ್​ ಸಮಾವೇಶ ನಡೆಯುತ್ತಿದೆ.
ನಗರದ ಮುನ್ಸಿಪಲ್​ ಮೈದಾನದಲ್ಲಿ ನಡೆಯುತ್ತಿರುವ ಬೃಹತ್​ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್​, ಚತ್ತೀಸ್​ಗಡ ಮುಖ್ಯಮಂತ್ರಿ ಬೂಪೇಶ್​ ಬಾಬಲೆ, ಎಐಸಿಸಿ ಪ್ರಮುಖರಾದ ಕಮಲ್​ ನಾಥ್​, ದಿಗ್ವಿಜಯ್​ ಸಿಂಗ್​, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್​, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​ ಸೇರದಿಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದಾರೆ. ರಾಹುಲ್​ ಗಾಂಧಿ ಅವರನ್ನ ನೋಡಲು ವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಜನರು ಆಗಮಿಸಿದ್ದರಿಂದ ಬೇಸರ ಕಳೆಯಲು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿವಿಧ ಕಲಾ ತಂಡಗಳು ಹಲವು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮ ನೀಡಿ ರಂಜಿಸಿದವು. ನಟ ಪುನೀತ್ ರಾಜ್​ಕುಮಾರ್ ಅವರ ‘ಬೊಂಬೆ ಹೇಳುತೈತೆ…’ ಹಾಡಿಗೆ ಜನರು ಮೊಬೈಲ್ ಟಾರ್ಚ್ ಆನ್ ಮಾಡಿ ತಾವೂ ದನಿಗೂಡಿಸಿದರು. ನೃತ್ಯಗಾರರ ಮೈ ಮೇಲೆ ರಾಗಾ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರ ಬಿಡಿಸಿದ್ದು ಗಮನ ಸೆಳೆಯಿತು. ದೇಶಭಕ್ತಿ, ಭಾವಗೀತೆ ಹಾಗೂ ಚಿತ್ರ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಪ್ರತಿಯೊಂದು ಹಾಡಿನಲ್ಲೂ ಕಾಂಗ್ರೆಸ್ ಪಕ್ಷದ ಬಾವುಟ ಹಾಗೂ ರಾಹುಲ್​ ಗಾಂಧಿ ಅವರನ್ನ ಮುಖ್ಯವಾಗಿ ಬಿಂಬಿಸಿದ್ದು ವಿಶೇಷವಾಗಿತ್ತು.
LIVE| ಬಳ್ಳಾರಿಯಲ್ಲಿ ಭಾರತ್‌ ಜೋಡೋ ಯಾತ್ರೆಯ ಬೃಹತ್‌ ಸಮಾವೇಶ… ನೇರಪ್ರಸಾರ ಇಲ್ಲಿದೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ಬನ್ನೇರುಘಟ್ಟ ಉದ್ಯಾನದಲ್ಲಿ ನೀರಾನೆ ಮರಿಗೆ ವೈದ್ಯರಿಂದ ಮರುಜೀವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
