ಮಂಡ್ಯ:ರಾಹುಲ್​ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, ಜಿಲ್ಲಾ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಮೈಸೂರಿನಿಂದ ಸೋಮವಾರ ಬೆಳಗ್ಗೆ 6.30ಕ್ಕೆ ಹೊರ ಯಾತ್ರೆಯು ಲಕ್ಷ್ಮೀಪುರ ಗ್ರಾಮದ ಮೂಲಕ ಬೆಳಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲೆಯನ್ನ ಪ್ರವೇಶಿಸಿತು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿ ಸೇರಿದ್ದ ಸಾವಿರಾರು ಜನರು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ರಾಹುಲ್​ಗಾಂಧಿ ಅವರನ್ನ ಸ್ವಾಗತಿಸಿ, ಅವರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ವಿವಿಧ ಜಾನಪದ ಕಲಾ ತಂಡಗಳ ಮೆರುಗು, ಕಾರ್ಯಕರ್ತರ ರಣ ಉತ್ಸಾಹದೊಂದಿಗೆ ಯಾತ್ರೆ ನಡೆಯುತ್ತಿದೆ.
ಇಂದು ಮಧ್ಯಾಹ್ನ 12ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್​ನ ಅಧಿನಾಯಕಿ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ದಸರಾ ಅಂಗವಾಗಿ ಪಾದಯಾತ್ರೆಗೆ ಸೆ.4 ಮತ್ತು 5ರಂದು ವಿರಾಮ ನೀಡಿರುವುದರಿಂದ ಸೋನಿಯಾ ಅವರೊಂದಿಗೆ ರಾಹುಲ್​ ಕೂಡ ಕೊಡಗು ಜಿಲ್ಲೆಗೆ ತೆರಳಿ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿ ವಿಶ್ರಾಂತಿ ಪಡೆಯಲಿದ್ದಾರೆ. ಸೆ. 6ರಂದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಮರುಚಾಲನೆ ದೊರೆಯುವ ಯಾತ್ರೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ರಾಹುಲ್​ ಜತೆ ಹೆಜ್ಜೆ ಹಾಕಲಿದ್ದಾರೆ.
ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಒಡೆದ ಮನಸ್ಸುಗಳ ಬೆಸುಗೆಗೆ ಸಾಕ್ಷಿ ಆದ ಬದನವಾಳು: ಭಾರತ್ ಜೋಡೋ ಯಾತ್ರೆಯಲ್ಲಿ ವಿಶೇಷ ಸಂದರ್ಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 8 =
Remember me
