ಯಳಂದೂರು:ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಇದನ್ನೂ ಓದಿ:L.S. Polls | ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಇವಿಎಂ ಕೊಳಕ್ಕೆ ಎಸೆದು ದುಷ್ಕೃತ್ಯ
ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಿಂದ ದೇವರ ದರ್ಶನಕ್ಕೆ ಭಕ್ತರು ಹೋಗಿ ದರ್ಶನ ಮುಗಿಸಿಕೊಂಡು ಯಳಂದೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಬಿಳಿಗಿರಿರಂಗನ ಬೆಟ್ಟದ ಗವಿ ಬೋರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಪಘಾತವಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ, ಈ ಘಟನೆಯಲ್ಲಿ ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 13 ಮಂದಿ ಚುನಾವಣಾ ಸಿಬ್ಬಂದಿ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
